Top

ನಟ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು..!

ನಟ ಶಿವರಾಜ್‌ಕುಮಾರ್ ಆಸ್ಪತ್ರೆಗೆ ದಾಖಲು..!
X

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅನಾರೋಗ್ಯ ಹಿನ್ನೆಲೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವರಾಜ್‌ಕುಮಾರ್ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದು, ಜ್ವರದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಮೂಲಗಳ ಪ್ರಕಾರ ಜ್ವರ, ಕೆಮ್ಮಿನಿಂದ ಬಳಲುತ್ತಿದ್ದು, ಶಿವಣ್ಣನ ಜೊತೆ ಅವರ ಕುಟುಂಬಸ್ಥರು ಜೊತೆಗಿದ್ದಾರೆ. ವಿನಯ್ ರಾಜ್‌ಕುಮಾರ್ ಆರೋಗ್ಯ ವಿಚಾರಿಸಿ ಹೋಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಸತತ ಸಿನಿಮಾಗಳ ಚಿತ್ರೀಕರಣದಿಂದ ಶಿವರಾಜ್‌ಕುಮಾರ್ ಆಯಾಸವಾಗಿದ್ದು, ನಿನ್ನೆ ಸಂಜೆಯಿಂದ ಜ್ವರ ಕಾಣಿಸಿಕೊಂಡಿತ್ತು. ಜ್ವರದ ತೀವ್ರತೆ ಹೆಚ್ಚಾದ ಕಾರಣ, ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಗ್ಲುಕೋಸ್ ಡ್ರಿಪ್ಸ್ ಹಾಕಿದ್ದಾರೆ.

ಬೆಳಿಗ್ಗೆ ಲಘು ಉಪಹಾರ ಸೇವಿಸಿದ್ದು, ಸದ್ಯ ಶಿವರಾಜ್‌ಕುಮಾರ್ ಆರೋಗ್ಯವಾಗಿದ್ದಾರೆ. ಆರಾಮಾಗಿ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಮಧ್ಯಾಹ್ನದ ವೇಳೆ ಮನೆಗೆ ವಾಪಸ್ಸಾಗೋ ಸಾಧ್ಯತೆ ಇದೆ.

Next Story

RELATED STORIES