Top

ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ಪ್ರವೇಶಿಸಲು ಸಜ್ಜು

ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ಪ್ರವೇಶಿಸಲು ಸಜ್ಜು
X

ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಗೆ ಶಬರಿಮಲೆ ಸ್ವಾಮಿ ದೇವಸ್ಥಾನದ ಬಾಗಿಲು ಬುಧವಾರ ಸಂಜೆ ತೆರೆಯಲು ಸಿದ್ಧತೆ ನಡೆಯುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಒಂದು ಕಡೆ ಸಜ್ಜಾಗಿದ್ದರೆ, ಮತ್ತೊಂದು ಕಡೆ ಅವರನ್ನು ತಡೆಯಲು ಸಂಪ್ರದಾಯವಾದಿಗಳ ಒಂದು ತಂಡ ಸಿದ್ಧವಾಗಿದೆ.

ಸುಪ್ರೀಂಕೋರ್ಟ್ ತೀರ್ಪಿನ ನಂತರ ಇದೇ ಮೊದಲ ಬಾರಿ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯುತ್ತಿದೆ. ಶತಮಾನಗಳಿಂದ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಇದ್ದ ನಿಷೇಧವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿ ಎಲ್ಲಾ ವಯೋಮಾನದವರಿಗೂ ಅವಕಾಶ ಕಲ್ಪಸಿದೆ.

ಸುಪ್ರೀಂಕೋರ್ಟ್ ತೀರ್ಪಿನಿಂದ ಅಸಮಾಧಾನಗೊಂಡಿರುವ ಸಂಪ್ರದಾಯವಾದಿಗಳು ಹಾಗೂ ಭಕ್ತರ ಒಂದು ತಂಡ ಮೂಲ ದೇವಸ್ಥಾನದಿಂದ 20 ಕಿ.ಮೀ. ದೂರದಲ್ಲಿರುವ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ತಡೆಯೊಡ್ಡುತ್ತಿದ್ದಾರೆ.

ಮಹಿಳೆಯರನ್ನೊಳಗೊಂಡ ಭಕ್ತರ ಗುಂಪು ವಾಹನಗಳನ್ನು ತಪಾಸಣೆ ಮಾಡಿ ಮಹಿಳೆಯರನ್ನು ತಡೆಯುತ್ತಿದ್ದಾರೆ. ಮತ್ತೊಂದೆಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೇರಳ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಿದ್ದು, 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Next Story

RELATED STORIES