ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

X
TV5 Kannada17 Oct 2018 6:13 AM GMT
ಅಸ್ವಸ್ಥಗೊಂಡಿದ್ದ ನಟ ಶಿವರಾಜ್ ಕುಮಾರ್ ಸಂಪೂರ್ಣ ಗುಣಮುಖರಾಗಿದ್ದು, ಬುಧವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾದರು.
ಜ್ವರದ ಕಾರಣ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ವೈದ್ಯರು ಯಾವುದೇ ನಿಯಂತ್ರಣ ಹೇರಿಲ್ಲ ಎಂದು ಸ್ಪಷ್ಟಪಡಿಸಿದರು.
ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗಿರುತ್ತಿರುವ ದಿ ವಿಲನ್ ಚಿತ್ರದ ಬಿಡುಗಡೆ ಬಗ್ಗೆ ಕುತೂಹಲ ವ್ಯಕ್ತಪಡಿಸಿದ ಶಿವರಾಜ್ ಕುಮಾರ್, ಅಭಿಮಾನಿಗಳ ಜೊತೆ ಸಿನಿಮಾ ನೋಡುವ ಇಂಗಿತ ವ್ಯಕ್ತಪಡಿಸಿದರು.
ದಿ ವಿಲನ್ ಸಿನಿಮಾ ನೋಡಲು ನನಗೂ ಕುತೂಹಲ ಇದೆ. ನಾಳೆ ವಿಲನ್ ಚಿತ್ರ ನೋಡಿದ ನಂತರ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ವಿಲನ್ ಚಿತ್ರದ ಪ್ರಮೋಷನ್ ಮುಗಿದ ಕೂಡಲೇ ದ್ರೋಣ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಶಿವರಾಜ್ ಕುಮಾರ್ ವಿವರಿಸಿದರು.
Next Story