Top

ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಅಗತ್ಯ: ಆರ್​ಎಸ್​ಎಸ್ ಮುಖ್ಯಸ್ಥ

ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಅಗತ್ಯ: ಆರ್​ಎಸ್​ಎಸ್ ಮುಖ್ಯಸ್ಥ
X

ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯವಾದ ಕಾನೂನನ್ನು ಕೇಂದ್ರ ಸರಕಾರ ರೂಪಿಸಬೇಕು ಎಂದು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ದೆಹಲಿಯ ಆರ್​ಎಸ್​ಎಸ್ ಕಚೇರಿಯಲ್ಲಿ ವಿಜಯದಶಮಿ ಅಂಗವಾಗಿ ಭಾಷಣ ಮಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ತೊಡಕಾಗಿರುವ ಭೂ ವಿವಾದವನ್ನು ಶೀಘ್ರವೇ ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಶೀಘ್ರ ತೀರ್ಮಾನ ಪ್ರಕಟಿಸಬೇಕು ಎಂದು ನುಡಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಜವಾಬ್ದಾರಿ ಕೇಂದ್ರ ಸರಕಾರದ್ದು. ವಿವಾದವನ್ನು ಇತ್ಯರ್ಥಗೊಳಿಸಲು ಸೂಕ್ತ ಕಾನೂನು ರೂಪಿಸಬೇಕು. ಇದರಿಂದ ಮುಂದಿನ ಲೋಕಸಭಾ ಚುನಾವಣೆಯ ವೇಳೆ ಜನರಿಗೆ ಒಳ್ಳೆಯ ಸಂದೇಶ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ ದೇಶವನ್ನು ಒಗ್ಗೂಡಿಸುವ ಪಕ್ಷಕ್ಕೆ ಜನರು ಮತ ನೀಡಬೇಕು. ದೇಶವನ್ನು ಒಡೆಯುವ ಪಕ್ಷಗಳನ್ನು ದೂರವಿಡಿ ಎಂದು ಮೋಹನ್ ಭಾಗವತ್ ಕರೆ ನೀಡಿದರು.

Next Story

RELATED STORIES