Top

ಬಹಿರಂಗವಾಗಿ ಕ್ಷಮೆ ಕೇಳಿದ ಸಚಿವ ಡಿ.ಕೆ.ಶಿವಕುಮಾರ್..!

ಬಹಿರಂಗವಾಗಿ ಕ್ಷಮೆ ಕೇಳಿದ ಸಚಿವ ಡಿ.ಕೆ.ಶಿವಕುಮಾರ್..!
X

ಗದಗ: ಗದಗನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ರಂಭಾಪುರಿ ಶ್ರೀಗಳ ದಸರಾ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಪ್ರಥಮ ಬಾರಿಗೆ ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ್ದಾರೆ.

ವೀರಶೈವ ಲಿಂಗಾಯಿತ ಧರ್ಮ ವಿಭಜನೆ ವಿಚಾರ ಮಾತನಾಡಿದ ಡಿಕೆಶಿ, ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಯಾವ ಸರ್ಕಾರವೂ ಕೈ ಹಾಕಬಾರದು.

ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ಮೊನ್ನೆ ನಡೆದ ಜನಾಭಿಪ್ರಾಯವೇ ಸಾಕ್ಷಿ.

ದಯವಿಟ್ಟು ನಾವು ಸರ್ಕಾರ ತಪ್ಪು ಮಾಡಿದ್ರೆ ನಿಮ್ಮ ಕ್ಷಮೆ ಇರಲಿ, ಹೃದಯತುಂಬಿ ನಮ್ಮನ್ನು ಕ್ಷಮಿಸಿ ಎಂದು, ರಂಭಾಪುರಿ ಶ್ರೀಗಳ ದಸರಾ ಧರ್ಮಸಮ್ಮೇಳನ ಕಾರ್ಯಕ್ರದಲ್ಲಿ ಡಿಕೆಶಿ ಕ್ಷಮೆಯಾಚಿಸಿದ್ದಾರೆ.

Next Story

RELATED STORIES