Top

ದಶಕದ ನಂತರ ಹೋರಾಟಕ್ಕೆ ಒಗ್ಗಟ್ಟಾದ ಗುರು-ಶಿಷ್ಯರು!

ದಶಕದ ನಂತರ ಹೋರಾಟಕ್ಕೆ ಒಗ್ಗಟ್ಟಾದ ಗುರು-ಶಿಷ್ಯರು!
X

ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ದೇಶಾದ್ಯಂತ ಹೋರಾಟವನ್ನು ಕರ್ನಾಟಕದಿಂದಲೇ ಆರಂಭಿಸಲು ಕಾಂಗ್ರೆಸ್-ಜೆಡಿಎಸ್ ಒಗ್ಗಟ್ಟಾಗಿವೆ. ಈ ಹೋರಾಟಕ್ಕೆ ಕೈ ಜೋಡಿಸುವ ಮೂಲಕ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡರು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಎಚ್​.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂತಾದ ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು-ಕಾಶ್ಮೀರದಲ್ಲಿ ಆಗುತ್ತಿರುವ ಬೆಳವಣಿಗೆ ದೇಶಕ್ಕೆ ಮಾರಕವಾಗಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಒಗ್ಗಟ್ಟಾಗಿ ಹೋರಾಟ ನಡೆಸಲು ಕಾಂಗ್ರೆಸ್​-ಜೆಡಿಎಸ್ ಒಂದಾಗಿದೆ ಎಂದರು.

ಎರಡೂ ಪಕ್ಷಗಳು ಒಂದಾಗಿದ್ದರೂ ತಳಮಟ್ಟದಲ್ಲಿ ಸಣ್ಣಪುಟ್ಟ ಅಸಮಾಧಾನ ಇದೆ. ಇದನ್ನು ಹೋಗಲಾಡಿಸುವುದು ಸುಲಭವಲ್ಲ. ಇದೇ ವೇಳೆ ಮುಂದಿನ 5 ಕ್ಷೇತ್ರಗಳ ಉಪಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಲಿದ್ದೇವೆ ಎಂದು ದೇವೇಗೌಡರು ಹೇಳಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ನಾವು ಒಂದಾಗಿದ್ದೇವೆ. ಎರಡೂ ಪಕ್ಷಗಳು ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಲಿದ್ದು, 5 ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಜಯ ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Next Story

RELATED STORIES