ಇನ್ನು ಮುಂದೆ ಮನೆಗೆ ಬರಲಿದೆ ಎಣ್ಣೆ!

X
TV5 Kannada20 Oct 2018 11:58 AM GMT
ಸರ್ಕಾರದ ಅದಾಯ ಹೆಚ್ಚಿಸುವ ಉದ್ದೇಶದಿಂದ ಆನ್ ಲೈನ್ ಮೂಲಕ ಮದ್ಯಮಾರಾಟ ಮಾಡಲು ಅಬಕಾರಿ ಇಲಾಖೆ ಚಿಂತನೆ ನಡೆಸಿದ್ದು, ಇದಕ್ಕಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ.
ಈ ವರ್ಷ ಅಬಕಾರಿ ಇಲಾಖೆಯಿಂದ ಸರ್ಕಾರ 10 ಸಾವಿರ ಕೋಟಿ ಆದಾಯವನ್ನು ನಿರೀಕ್ಷಿಸಿದೆ. ಹೀಗಾಗಿ ಆನ್ಲೈನ್ ಮೂಲಕ ನೇರವಾಗಿ ಮನೆಗೆ ಮದ್ಯವನ್ನು ತಲುಪಿಸುವ ಮೂಲಕ ವರಮಾನವನ್ನು ಹೆಚ್ಚಿಸಬಹುದೆಂಬ ಲೆಕ್ಕಾಚಾರ ಸರ್ಕಾರದ್ದಾಗಿದೆ.
ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು. ಆನ್ಲೈನ್ನಲ್ಲಿ ಮದ್ಯ ಮಾರಾಟ ಮಾಡುವುದರಿಂದ ಆಗಬಹುದಾದ ಲಾಭ-ನಷ್ಟ, ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಅಬಕಾರಿ ಇಲಾಖೆ ಅಧಿಕಾರಿಗಳು, ಸಿಎಂ ಜೊತೆ ಮಾತುಕತೆ ನಡೆಸಿ ಅನುಮತಿ ದೊರೆತ ನಂತರ ಮುಂದಿನ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಎಲ್ಲಾ ಸಾಧ್ಯತೆಯಿದೆ.
Next Story