Top

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ : ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ : ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ
X

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಚಿವ ಡಿಕೆಶಿ ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧ ಚರ್ಚೆಗಳು ಮುಂದುವರಿದಿವೆ. ಒಂದು ಕಡೆ ಡಿಕೆಶಿ ಹೇಳಿಕೆಯನ್ನ ವೀರಶೈವ ಮುಖಂಡರು ಸಮರ್ಥಿಸಿಕೊಂಡಿದ್ದಾರೆ, ಮತ್ತೊಂದು ಕಡೆ ಲಿಂಗಾಯತ ಹೋರಾಟಗಾರರು ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡ್ತಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಿದ್ದು ಸರಿಯಲ್ಲವೆಂದು ಹೇಳಿದ್ದು ಸತ್ಯ ಅದಕ್ಕೆ ಈಗಲೂ ನಾನು ಬದ್ಧನಾಗಿದ್ದೇನೆ ಅಂತ ಮತ್ತೆ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಯಾವುದೇ ಕಾರಣಕ್ಕೂ ಜಾತಿ, ಧರ್ಮವನ್ನ ವಿಭಜನೆ ಮಾಡಿಲ್ಲ, ಮಾಡುವುದೂ ಇಲ್ಲ ಅಂತ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.

ಆಯಾ ಸಮುದಾಯಗಳ ಬೇಡಿಕೆ ಆಧರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ. ಶಿಫಾರಸು ಮಾಡುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಸಾಮೂಹಿಕವಾಗಿ ತೆಗೆದುಕೊಳ್ಳಲಾಗಿದೆ ಎಂದರು.

ಡಿ.ಕೆ.ಶಿವಕುಮಾರ್ ಆಗ ಒಪ್ಪಿಗೆ ನೀಡಿದ್ದರು ಎಂದ ಮೇಲೆ ಅದು ಸಾಮೂಹಿಕ ನಿರ್ಧಾರವೇ ಆಗಿದೆ. ಈಗ ಅವರು ಯಾವ ಸಂದರ್ಭದಲ್ಲಿ, ಯಾವ ಕಾರಣಕ್ಕೆ ಕ್ಷಮಾಪಣೆ ಕೇಳಿದ್ದಾರೋ ಗೊತ್ತಿಲ್ಲ. ಡಿಕೆ ಶಿವಕುಮಾರ್ ಮತ್ತು ಎಂ.ಬಿ ಪಾಟೀಲ್ ಪರಸ್ಪರ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳಿಕೊಂಡಿದ್ದಾರೆ. ಲಿಂಗಾಯತ ವೀರಶೈವ ಪ್ರತ್ಯೇಕ ಧರ್ಮದ ಶಿಫಾರಸ್ಸಿಗೂ, ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಅದು ಸರ್ಕಾರದ ನಿರ್ಧಾರ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಧರ್ಮ ರಾಜಕಾರಣ ವಿಷಯವಾಗಿ ಹೇಳಿಕೆ ನೀಡಿದ್ದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಂದು ಜೆಡಿಎಸ್-ಕಾಂಗ್ರೆಸ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಭಾಗವಹಿಸಿದ್ದರೂ ಪರಸ್ಪರ ಮುಖ ಕೊಟ್ಟು ಮಾತನಾಡದೆ ದೂರ ಉಳಿದರು.

ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ ದೇವೇಗೌಡರ ಪಕ್ಕ ಕುಳಿತರೆ, ಡಿಕೆ ಶಿವಕುಮಾರ್ ಸಿಎಂ ಕುಮಾರಸ್ವಾಮಿ ಪಕ್ಕ ಕೊನೆಯ ಕುರ್ಚಿಯಲ್ಲಿ ಕುಳಿತುಕೊಂಡಿದರು. ಪತ್ರಿಕಾಗೋಷ್ಠಿ ವೇಳೆಯೇ ಸಿದ್ದುಗೆ ಧರ್ಮರಾಜಕಾರಣದ ಕುರಿತು ಪ್ರಶ್ನೆ ಎದುರಾದಾಗ ಆ ವಿಚಾರದ ಬಗ್ಗೆ ಇಲ್ಲ ಬೇಡ ನಿಮಗೆ ಬೇರೆ ಕಡೆ ಹೇಳಿಕೆ ಕೊಡ್ತೇನೆ ಅಂತ ಡಿಕೆಶಿ ನಗುತ್ತಲೇ ಕುಳಿತುಕೊಂಡಿದರು.

ಒಟ್ಟಿನಲ್ಲಿ ಲಿಂಗಾಯತ ಧರ್ಮದ ವಿಚಾರದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಪರೋಕ್ಷ ಕದನ ಪ್ರಾರಂಭವಾಗಿದೆ. ಅದು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡೋಕೆ ಈ ಪ್ಲಾನ್ ನಡೆದಿದ್ಯಾ ಅಥವಾ ಬೈ ಎಲೆಕ್ಷನ್ ನಲ್ಲಿ ಲಿಂಗಾಯತ ಸಮುದಾಯದ ಮತ ಸೆಳೆಯೋಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಇದನ್ನು ಬಳಸಿಕೊಂಡಿದ್ದರಾ ಎಂಬ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ದೊರೆಯ ಬೇಕಿದೆ.

ವರದಿ : ಶಿವಕುಮಾರ್ ಜೋಹಳ್ಳಿ, ಪೊಲಿಟಿಕಲ್ ಬ್ಯೂರೋ, ಟಿವಿ5 ಬೆಂಗಳೂರು

Next Story

RELATED STORIES