ಗ್ರಾಮಸ್ಥರಿಂದ ತಹಶೀಲ್ದಾರ್ ಕಚೇರಿ ಮೇಲೆ ಕಲ್ಲು ತೂರಾಟ

X
TV5 Kannada21 Oct 2018 4:44 PM GMT
ವೀರಯೋಧ ಉಮೇಶ್ ಹೆಳವರ್ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ನೀಡಬೇಕೆಂದು, ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ತಹಶೀಲ್ದಾರ್ ವೀರಯೋಧ ಉಮೇಶ್ ಹೆಳವರ್ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ನೀಡಲು ನಿರಾಕರಿಸಿದ್ದರಿಂದ, ಸಿಟ್ಟುಗೊಂಡ ಗ್ರಾಮಸ್ಥರು, ತಹಶೀಲ್ದಾರ್ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದರು.
ಈ ಘಟನೆಯಿಂದಾಗಿ, ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿಯ ಗಾಜುಗಳು ಪುಡಿ ಪುಡಿಗೊಂಡವು. ಘಟನೆಯಿಂದಾಗಿ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡ ಹಿನ್ನಲೆಯಲ್ಲಿ, ಗೋಕಾಕ ಶಹರ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
Next Story