Top

ರಫೆಲ್‌ ಹಗರಣ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ರಫೆಲ್‌ ಹಗರಣ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
X

ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಬೈಕ್ ರ‍್ಯಾಲಿ ಮುಖಾಂತರ ಹೊರಟಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಶೇಷಾದ್ರಿಪುರದ ನಟರಾಜ್ ಚಿತ್ರಮಂದಿರ ಸಮೀಪ ನಡೆದಿದೆ.

ಕೇಂದ್ರ ಸರ್ಕಾರದ ರಫೆಲ್ ಯುದ್ದವಿಮಾನ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರು.

ರಾಜ್ಯ ಯುವ ಕಾಂಗ್ರೆಸ್ ನಡೆಸುತ್ತೀರುವ ರ‍್ಯಾಲಿಯಲ್ಲಿ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವ ವಹಿಸಿಕೊಂಡಿದ್ದು, ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ದ್ವಿಚಕ್ರ ವಾಹನದ ಮೂಲಕ ಪ್ರತಿಭಟನ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವ, ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಕೇಶವ ಚಂದ್ ಯಾದವ್, ಉಪಾಧ್ಯಕ್ಷ ಶ್ರೀನಿವಾಸ್ ಬಿ. ವಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ದಾಸ್, ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳು, ಯುವ ನಾಯಕ ಮೊಹಮ್ಮದ್ ನಲಪಾಡ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇನ್ನೊಂದೆಡೆ ನಟರಾಜ ಚಿತ್ರಮಂದಿರ ಮುಂಭಾಗ ಏಕಮುಖ ಸಂಚಾರ ವಿದ್ದ ಕಾರಣ ಟ್ರಾಫಿಕ್ ಜಾಮ್ ಆಗಿದ್ದು. ಅರ್ಧ ಗಂಟೆಗೂ ಹೆಚ್ಚುಕಾಲ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಸಮಸ್ಯೆ ಎದುರಿಸುವಂತೆ ಆಯಿತು.

Next Story

RELATED STORIES