ಬಿಷಬ್ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದ ಪಾದ್ರಿ ಸಾವು

X
TV5 Kannada22 Oct 2018 8:15 AM GMT
ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರದ ಆರೋಪ ಎದುರಿಸುತ್ತಿರುವ ಕೇರಳದ ರೋಮನ್ ಕ್ಯಾಥೊಲಿಕ್ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಹೇಳಿಕೆ ನೀಡಿದ್ದ ಪಾದ್ರಿಯ ಮೃತದೇಹ ಪತ್ತೆಯಾಗಿದೆ.
ಕುರಿಯಕೋಸ್ ಕಟ್ಟುಥಾರ ಎಂಬುವವರ ಮೃತದೇಹ ಜಲಂಧರ್ ನಲ್ಲಿ ಪತ್ತೆಯಾಗಿದ್ದು, ಅನುಮಾನಗಳನ್ನು ಹುಟ್ಟುಹಾಕಿದೆ.
ಕುರಿಯಕೋಸ್ ಅವರ ಸಾವಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಆದರೆ, ಅವರ ಕುಟುಂಬಸ್ಥರು ಸಾವಿನ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಫಾದರ್ ಕುರಿಯಕೋಸ್, ಬಿಷಪ್ ಫ್ರಾಂಕೋ ವಿರುದ್ಧ ಕೇರಳ ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಕುರಿಯಕೋಸ್ ಅವರ ಸಹೋದರ ಜೋಸ್ ಕಟ್ಟುಥಾರ ಅವರು, ಸಹೋದರನ ಸಾವಿನ ಹಿಂದೆ ದೊಡ್ಡ ಪಿತೂರಿಯೇ ನಡೆದಿದೆ. ಬಿಷಪ್ ಫ್ರಾಂಕೋ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅವರನ್ನು ಹತ್ಯೆ ಮಾಡಲಾಗಿದೆ. ಕೆಲ ದಿನಗಳಿಂದ ಚರ್ಚ್ ಅಧಿಕಾರಿಗಳಿಂದ ತಮಗೆ ಜೀವ ಬೆದರಿಕೆ ಕರೆ ಬರುತ್ತಿರುವುದಾಗಿಯೂ ಕುರಿಯಕೋಸ್ ಹೇಳುತ್ತಿದ್ದರು ಎಂದು ಹೇಳಿದ್ದಾರೆ.
Next Story