ಮಂಡ್ಯದಲ್ಲಿ ರಂಗೇರಿದ ಉಪಚುನಾವಣೆ ಪ್ರಚಾರದ ಕಾವು!

ಲೋಕಸಭಾ ಉಪಚುನಾವಣೆ ಪ್ರಚಾರದ ಕಾವು ರಂಗೇರಿದ್ದು, ನಾಳೆ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಮಂಡ್ಯದಲ್ಲಿ ಭರ್ಜರಿ ಮತ ಪ್ರಚಾರ ನಡೆಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದರಾಮಯ್ಯ ಪರ ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರಕ್ಕೆ ಎರಡನೇ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್.ಪೇಟೆ, ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಸಭೆ ನಡೆಸಲಿದ್ದು. ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಶಾಸಕರಾದ ಆರ್.ಅಶೋಕ್, ನಾಗೇಂದ್ರ, ನಿರಂಜನ್ ಕುಮಾರ್, ಅಭ್ಯರ್ಥಿ ಸಿದ್ದರಾಮಯ್ಯ ಸೇರಿದಂತೆ ಜಿಲ್ಲಾ ನಾಯಕರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನೂಂದೆಡೆ ಜೆಡಿಎಸ್ ಕಾಂಗ್ರೆಸ್ ಪಕ್ಷದವರ ಪ್ರಚಾರಕ್ಕೆ ಸೆಡ್ಡು ಹೊಡೆದಂತೆ ಪ್ರಚಾರ ನಡೆಸಲು ತಂತ್ರ ರೂಪೀಸಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಸೇರಿದಂತೆ ಅವರ ಅಪಾರ ಕಾರ್ಯಕರ್ತರೊಂದಿಗೆ ಬೃಹತ್ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಸಚಿವರಾದ ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್, ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ, ಎಂ.ಶ್ರೀನಿವಾಸ್, ನಾರಾಯಣಗೌಡ, ಕೆ.ಟಿ.ಶ್ರೀಕಂಠೇಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ.