ಏನೂ ಸಿಗದ್ದಕ್ಕೆ ಊಟ ಮಾಡಿ ಹೋದ ಖದೀಮರು!

X
TV5 Kannada24 Oct 2018 5:46 AM GMT
ಮನೆ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಏನೂ ಸಿಗದೇ ಕೊನೆಗೆ ಅಡುಗೆ ಮಾಡಿ ಊಟ ಮಾಡಿಕೊಂಡು ಹೋದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಆರ್ಟಿಪಿಎಸ್ ಕಾಲೋನಿಯ ಆರ್ಟಿಪಿಎಸ್ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನೆಯಲ್ಲಿ ಕಳ್ಳರು ಊಟ ಮಾಡಿ ಹೋಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿದ ಕಳ್ಳರು ಮನೆಯ ಹಿಂದಿನ ಬಾಗಿಲು ಮುರಿದು ನುಗ್ಗಿದ್ದಾರೆ. ಆದರೆ ಮನೆಯೆಲ್ಲಾ ಹುಡುಕಿದರೂ ಏನೂ ಸಿಗಲಿಲ್ಲ. ಇದರಿಂದ ಬೇಸತ್ತ ಕಳ್ಳರು ಅಡುಗೆ ಮನೆಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡಿಕೊಂಡು ಹೋಗಿದ್ದಾರೆ.
ಊಟ ಮಾಡಿದ ನಂತರ ಮತ್ತೆರೆಡು ಮನೆಗೆ ನುಗ್ಗಿದ ಕಳ್ಳರು ಸುಮಾರು 40 ಸಾವಿರ ರೂ. ಮೌಲ್ಯದ ವಸ್ತುಗಳನ್ನು ಕದ್ದಿದ್ದಾರೆ.
ವಿಷಯ ತಿಳಿದ ಶಕ್ತಿನಗರ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Next Story