ರಾಹುಲ್ ಗಾಂಧಿ ಬಂಧನ, ಬಿಡುಗಡೆ

ಸಿಬಿಐ ಮುಖ್ಯಸ್ಥರನ್ನು ರಾತ್ರೋರಾತ್ರಿ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರಕಾರದ ನಿಲುವು ಖಂಡಿಸಿ ಕಾಂಗ್ರೆಸ್ ಶುಕ್ರವಾರ ಬೆಳಗ್ಗೆ ದೆಹಲಿಯ ಸಿಬಿಐ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಹಾಗೂ ಸಹಾಯಕ ರಾಕೇಶ್ ಆಸ್ತಾನ ಅವರನ್ನು ಸರಕಾರ ಏಕಾಏಕಿ ರಜೆಯ ಮೇಲೆ ಕಳುಹಿಸಿತ್ತು. ಕೇಂದ್ರ ಸರಕಾರದ ಕಾರ್ಯವೈಖರಿಯನ್ನು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.
ಪ್ರತಿಭಟನೆಯಲ್ಲಿ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ, ಸಿಎಪಿಎಂ, ಸಿಪಿಐ ಸೇರಿದಂತೆ ಹಲವು ಪಕ್ಷಗಳ ಮುಖಂಡರು ದೆಹಲಿಯ ಲೋಧಿ ರಸ್ತೆಯಿಂದ ಸಿಬಿಐ ಮುಖ್ಯ ಕಚೇರಿವರೆಗೂ ಸುಮಾರು 4.2 ಕಿ.ಮೀ. ಪಾದಯಾತ್ರೆ ನಡೆಸಿದರು.
ಸಿಬಿಐ ಆಡಳಿತದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿರುವುದು ಕಾನೂನು, ಸಂವಿಧಾನ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.