ಮೋದಿ ದೇಶದ ಅತಿದೊಡ್ಡ ವಚನಭ್ರಷ್ಟ- ಸಿದ್ದರಾಮಯ್ಯ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗ ಲೋಕಸಭಾ ಉಪಚುನಾವಣೆ ನಡೆಯುತ್ತಿದೆ. ಹೊಂದಾಣಿಕೆ ಮೂಲಕ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೆವೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಹೇಳಿದ್ದಾರೆ.
ಅಲ್ಲದೇ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಸ್ಫರ್ಧೆ ಮಾಡಿದ್ದಾರೆ. ಐದು ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಗಂಭೀರವಾಗಿ ಪರಿಗಣಿಸಿದ್ದೇವೆ. ಮಂಡ್ಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದು, ಸರಿಯಾಗಲಿದೆ ಎಂದಿದ್ದಾರೆ.
ಇನ್ನು ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧದ ಅಲೆಯಿದೆ. ನಿರುದ್ಯೋಗ, ಆರ್ಥಿಕ ಪರಿಸ್ಥಿತಿ ಅದೋಗತಿ, ಬೆಲೆ ಹೆಚ್ಚಳದಿಂದ ಜನ ಬೇಸರಗೊಂಡಿದ್ದಾರೆ. ನಿರುದ್ಯೋಗಿಗಳು ಕೇಂದ್ರದ ವಿರುದ್ಧ ಭ್ರಮ ನಿರಸನಗೊಂಡಿದ್ದಾರೆ.
ಪೆಟ್ರೋಲ್, ಡಿಸೇಲ್, ಅಡುಗೆ ಅನಿಲದ ಬೆಲೆ ಗಗನಕ್ಕೆರಿದೆ. 2 ಕೋಟಿ ಉದ್ಯೋಗ ಸೃಷಿಸುತ್ತೇವೆ ಅಂದವರು 2 ಲಕ್ಷ ಕೂಡ ಮಾಡಿಲ್ಲ. ಆಡಳಿತದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಧಾನಿ ಮೋದಿ ದೇಶದ ಅತಿದೊಡ್ಡ ವಚನಭ್ರಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.