Top

ಉಪ ಚುನಾವಣೆ ಫಲಿತಾಂಶ: ಗುಪ್ತಚರ ವರದಿ ಏನು ಗೊತ್ತಾ?

ಉಪ ಚುನಾವಣೆ ಫಲಿತಾಂಶ: ಗುಪ್ತಚರ ವರದಿ ಏನು ಗೊತ್ತಾ?
X

ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ 3 ಲೋಕಸಭೆ ಹಾಗೂ 2 ವಿಧಾನಸಭಾ ಉಪ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್​ಗೆ ಮುಖಗಂಭವಾಗಲಿದೆ ಎಂದು ಗುಪ್ತಚರ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಗುಪ್ತಚರ ಇಲಾಖೆ ಉಪಚುನಾವಣೆಯ ಫಲಿತಾಂಶದ ಬಗ್ಗೆ ವರದಿ ನೀಡಿದ್ದು, ಇದರಲ್ಲಿ ಜೆಡಿಎಸ್​ 2 ಕ್ಷೇತ್ರದಲ್ಲಿ ಜಯ ಗಳಿಸಿದರೆ, ಬಿಜೆಪಿ ಮೂರು ಸ್ಥಾನದಲ್ಲಿ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಲಿದೆ ಎಂದು ಹೇಳಿದೆ.

ಶಿವಮೊಗ್ಗ, ಬಳ್ಳಾರಿ ಹಾಗೂ ಜಮಖಂಡಿ ಕ್ಷೇತ್ರಗಳು ಬಿಜೆಪಿಗೆ ಒಲಿಯಲಿದ್ದು, ರಾಮನಗರ ಹಾಗೂ ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ. ಶೂನ್ಯ ಸಂಪಾದನೆ ಮಾಡಲಿರುವ ಕಾಂಗ್ರೆಸ್ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಿದೆ.

ಗುಪ್ತಚರ ವರದಿ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕಣಕ್ಕಿಳಿಸಿರುವ ಶಿವಮೊಗ್ಗದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ದಿನ ಠಿಕಾಣಿ ಹೂಡಲು ಯೋಜಿಸಿದ್ದಾರೆ.

ಬಿಜೆಪಿಗಿಂತ ಒಂದು ಸ್ಥಾನ ಹೆಚ್ಚು ಗೆಲ್ಲಬೇಕೆಂಬುದು ದೋಸ್ತಿಸರಕಾರ ಹಠಕ್ಕೆ ಬಿದ್ದಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡರ ಮನಸ್ತಾಪ ದೋಸ್ತಿ ಸರ್ಕಾರದ ನಿದ್ದೆಗೆಡುವಂತೆ ಮಾಡಿದೆ. ಎರಡೂ ಪಕ್ಷಗಳ ಸ್ಥಳೀಯ ಮುಖಂಡರ ಅಸಮಾಧಾನ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

Next Story

RELATED STORIES