ಜಾಮೀನು ರಹಿತ ವಾರೆಂಟ್ ಜಾರಿ: ಈಶ್ವರಪ್ಪಗೆ ಸಂಕಷ್ಟ

X
TV5 Kannada29 Oct 2018 8:41 AM GMT
ಕರ್ನಾಟಕ ಬಂದ್ಗೆ ಕರೆ ನೀಡಿದ್ದಕ್ಕಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ಮೂಲಕ ಈಶ್ವರಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ.
2011ರಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ವಕೀಲರಾದ ಸಿರಾಜುದ್ದೀನ್ ಪಾಷಾ ಮಾಡಿದ್ದ ಮನವಿಯನ್ನು ರಾಜ್ಯಪಾಲರು ಅಂಗೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸಬೇಕಾಯಿತು.
ಈ ಬೆಳವಣಿಗೆಯನ್ನು ಖಂಡಿಸಿ ಆಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ.ಎಸ್.ಈಶ್ವರಪ್ಪ ಕರ್ನಾಟಕ ಬಂದ್ಗೆ ಕರೆ ನೀಡಿದ್ದರು. ಇದರಿಂದ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು ಎಂದು ವಕೀಲ ಧರ್ಮಪಾಲಗೌಡ ಖಾಸಗಿ ದೂರು ದಾಖಲಿಸಿದ್ದರು.
ಕೆ.ಎಸ್.ಈಶ್ವರಪ್ಪಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದ್ದರೂ ಗೈರು ಹಾಜರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ.
Next Story