ರಾಕೇಶ್ಸಿದ್ದರಾಮಯ್ಯ ಅಭಿಮಾನಿಗಳ ಆಕ್ರೋಶ

ಮಾಜಿ ಸಿಎಂ ಸಿದ್ದರಾಮಯ್ಯ ಮಗನ ಸಾವಿನ ಕುರಿತು ಮಾಜಿ ಶಾಸಕ ಜನಾರ್ದನ ರೆಡ್ಡಿ ನೀಡಿದ ಹೇಳಿಕೆಗೆ ಕೂಡಲೇ ಅವರು ಕ್ಷಮೇ ಕೇಳಬೇಕೆಂದು ರಾಕೇಶ್ ಸಿದ್ದರಾಮಯ್ಯ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಕೋರ್ಟ್ ಮುಂಭಾಗ ಮಾಜಿ ಸಚಿವ ಜನಾರ್ದನ ರೆಡ್ಡಿ ಭಾವಚಿತ್ರಗಳಿಗೆ ಚೆಪ್ಪಲಿ ಸೇವೆ ಮಾಡಿ ಭಾವಚಿತ್ರ ಸುಟ್ಟುಹಾಕುವ ಮೂಲಕ ಸಿದ್ದರಾಮಯ್ಯ ಅಭಿಮಾನಿಗಳು ಜನಾರ್ದನರೆಡ್ಡಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಪುತ್ರನ ಸಾವಿನ ವಿಚಾರವನ್ನು ಪ್ರಸ್ತಾಪಿಸಿದ್ದರು. ಪುತ್ರನ ಸಾವು, ಸಿದ್ದರಾಮಯ್ಯಗೆ ದೇವರು ಕೊಟ್ಟ ಶಿಕ್ಷೆ ಎಂದು ಹೇಳಿದ್ದಾರೆ. ಕೂಡಲೇ ಗಣಿ ಲೂಟಿ ಕೋರ ಜನಾರ್ಧನರೆಡ್ಡಿ ಕ್ಷಮೆಯಾಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಅವರ ನಿವಾಸದ ಮುಂದೆ ಧರಣಿ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ರಾಕೇಶ್ ಸಿದ್ದರಾಮಯ್ಯ ಅಭಿಮಾನಿಗಳಿಗೆ ನೋವಾಗಿದ್ದು ಜನರ್ದಾನ ರೆಡ್ಡಿ ಕ್ಷಮೇಯಾಚನೆ ಮಾಡಬೇಕು ಎಂದು ಕುರುಬ ಸಂಘಟನೆಗಳು ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.