Top

ಇಂಗ್ಲೀಷ್​ನಲ್ಲಿ ರಾಜ್ಯೋತ್ಸವ ಶುಭ ಕೋರಿದ ಶೋಭಾ, ಸಿಎಂ!

ಇಂಗ್ಲೀಷ್​ನಲ್ಲಿ ರಾಜ್ಯೋತ್ಸವ ಶುಭ ಕೋರಿದ ಶೋಭಾ, ಸಿಎಂ!
X

ಪ್ರಧಾನಿ, ರಾಜ್ಯಪಾಲ ರಾಮ್‌ನಾಥ್ ಕೋವಿಂದ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದ ಹಲವಾರು ನಾಯಕರು ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಟ್ವೀಟ್ ಮಾಡಿ ಶುಭ ಕೋರಿದರೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಇಂಗ್ಲೀಷ್​ನಲ್ಲಿ ಟ್ವೀಟ್ ಮಾಡಿ ಶುಭ ಕೋರಿರುವುದು ಕನ್ನಡಿಗರನ್ನು ಕೆರಳಿಸಿದೆ.

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಷಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಷ್ಟ್ರಪತಿ ಕೊವಿಂದ್ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಷಯ ತಿಳಿಸಿದ್ದಾರೆ.

ಹರಿವ ನದಿಗಳಿಂದ ಹರಸೋ ರಸ ಋಷಿಗಳಿಂದ ಬರೆವ ಕವಿಗಳಿಂದ ಧನ್ಯ, ನೀನು ಸವಿಯ ನುಡಿಯ ಆಡುವ ಅಮರ ಸವಿಯ ಸವಿಯುವ ಕನ್ನಡಿಗರು ನಾವು ಧನ್ಯ ಧನ್ಯ ಕನ್ನಡ ದಿನದ ಶುಭಾಶಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಶುಭಾಶಯ ಕೋರಿದ್ದು, ವಿಜಯನಗರ ಸಾಮ್ರಾಜ್ಯದ ಪತನದ ನಂತರ ಹಂಚಿ ಹೋಗಿದ್ದ ಕನ್ನಡಿಗರು, ನಾಲ್ಕು ಶತಮಾನಗಳ ನಂತರ ಮತ್ತೆ ಕನ್ನಡ ತಾಯಿಯ ಮಡಿಲು ಸೇರಿದ ಸಂಭ್ರಮ. ಆ ಸಂಭ್ರಮವನ್ನು ಸ್ಮರಿಸುವ ದಿನವಾದ ಇಂದು ಕನ್ನಡ ನಾಡಿನ ಸಮಸ್ತರಿಗೂ ರಾಜ್ಯೋತ್ಸವದ ಶುಭಾಶಯ ಎಂದು ಹೇಳಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ್ದು, ಕನ್ನಡಾಭಿಮಾನ ರಾಜ್ಯೋತ್ಸವಕ್ಕೆ ಸೀಮಿತವಾಗಬಾರದು. ಅದು ಸದಾ ನಮ್ಮೆದೆಯೊಳಗೆ ಜೀವಂತವಿರಬೇಕು. ಭಾಷೆಯ ಜೊತೆ ನಾಡು ಬೆಳೆಯಬೇಕು. ಕನ್ನಡಿಗರು ಸಮರ್ಥರಾದರೆ ಕನ್ನಡ ಸಾಮರ್ಥ್ಯ ಪಡೆಯುತ್ತದೆ. ನಿಜವಾದ ಕನ್ನಡ ನಾಡನ್ನ ಕಟ್ಟುವ ಸಂಕಲ್ಪ ಮಾಡೋಣ ಎಂದಿದ್ದಾರೆ.

ಡಿಸಿಎಂ ಜಿ.ಪರಮೇಶ್ವರ್ ಕೂಡ ಶುಭಕೋರಿದ್ದು, ತಾಯ್ನಾಡು, ತಾಯ್ನುಡಿಯ ಮುಂದೆ ಎಲ್ಲವೂ ತೃಣ. ತೀರಿಸಲಾದೀತೆ ಆ ಕನ್ನಡಮ್ಮನ ಋಣ. ಸಿರಿಗನ್ನಡಂ ಗೆಲ್ಗೆ ಎಂಬುದಾಗಲಿ ನಮ್ಮೆಲ್ಲರ ಅಂಬೋಣ ಎಂದು ಕವನದ ಮೂಲಕ ಶುಭಕೋರಿದ್ದಾರೆ.

ಪವರ್ ಸ್ಟಾರ್ ಪವನ್ ಕಲ್ಯಾಣ್ ಕನ್ನಡ ರಾಜ್ಯೋತ್ಸವಕ್ಕೆ ವಿಶ್ ಮಾಡಿದ್ದು, ಸಿಎಂ ಕುಮಾರಸ್ವಾಮಿ ಜೊತೆ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಮೊಟ್ಟ ಮೊದಲ ಬಾರಿಗೆ ಪವನ್ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದು, ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

Next Story

RELATED STORIES