ಆಶ್ಚರ್ಯಕರ ರೀತಿಯಲ್ಲಿ ಬದುಕುಳಿದ ವಿದ್ಯಾರ್ಥಿನಿಯರು

ರಾಯಚೂರು: ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿದ ಹಿನ್ನೆಲೆ ಭಾರಿ ಪ್ರಮಾಣದ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿ ವಿದ್ಯಾರ್ಥಿನಿಯರಿಬ್ಬರು ಆಶ್ಚರ್ಯಕರ ರೀತಿಯಲ್ಲಿ ಸಾವಿನಿಂದ ಪಾರಾಗಿದ್ದಾರೆ.

ರಾಯಚೂರಿನ ಎಸ್.ಎಲ್.ಎನ್ ಕಾಲೇಜು ವಿದ್ಯಾರ್ಥಿನಿಯರಿಬ್ಬರು ಸ್ಕೂಟಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎಕಾಏಕಿ ಬಂದ ಭಾರಿ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿನಿಯರು ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ. ಇ‌ನ್ನು ಈ ಘಟನೆ ಬಸವೇಶ್ವರ ವೃತ್ತದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ವಾಟ್ಸ ಆಪ್ ಬಲ್ಲಿ ವೈರಲ್ ಆಗಿದೆ.