Top

ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿ 9ಜನರ ಸಾವು

ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿ 9ಜನರ ಸಾವು
X

ಸ್ಯಾನ್ ಫ್ರ್ಯಾನ್ಸಿಸ್ಕೋ: ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿ, 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯವಾಗಿದೆ. ಅಲ್ಲದೇ ಸ್ಥಳದಲ್ಲಿನ ಮನೆ, ಅರಣ್ಯ ಸಂಪತ್ತು ಕಾಡ್ಗಿಚ್ಚಿನ ನರ್ತನಕ್ಕೆ ನಾಶವಾಗಿದೆ.

ಮಾಲೀಬು ಎಂಬಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಹಲವಾರು ಮನೆಗಳು ಬೆಂಕಿಗಾಹುತಿಯಾಗಿದೆ. ಅಗ್ನಿಯ ರೌದ್ರ ನರ್ತನಕ್ಕೆ ಮಾಲೀಬು ಸುಟ್ಟು ಕರಕಲಾಗಿದ್ದು, ಅಲ್ಲಿನ ಜಯರನ್ನು ಸ್ಥಳಾಂತರಿಸಲಾಗಿದೆ.

ಅಲ್ಲದೇ ಮಾಲೀಬುನಲ್ಲಿ ಪ್ರಸಿದ್ಧ ವ್ಯಕ್ತಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ಇಲ್ಲಿನ ಪ್ರಸಿದ್ಧ ರೆಸಾರ್ಟ್ ಒಂದು ಕಾಡ್ಗಿಚ್ಚಿಗೆ ಬಲಿಯಾಗಿದ್ದು, ಸದ್ಯ 9 ಮಂದಿ ಮೃತಪಟ್ಟಿರುವುದನ್ನು ಅಲ್ಲಿನ ಅಧಿಕಾರಿಗಳು ಧೃಡಪಡಿಸಿದ್ದಾರೆ.

Next Story

RELATED STORIES