Top

ನವೆಂಬರ್ 22ರಂದು ಸಭೆ ಸೇರಲಿವೆ ಪ್ರಾದೇಶಿಕ ಪಕ್ಷಗಳು!

ನವೆಂಬರ್ 22ರಂದು ಸಭೆ ಸೇರಲಿವೆ ಪ್ರಾದೇಶಿಕ ಪಕ್ಷಗಳು!
X

ನವೆಂಬರ್ 22ರಂದು ಬಿಜೆಪಿಯೇತರ ಸರ್ವಪಕ್ಷಗಳ ಸಭೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿಗದಿಪಡಿಸಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗದ ಹೋರಾಟದ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

ದೆಹಲಿಯಲ ಆಂಧ್ರಭವನದಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಕಳೆದ ಕೆಲವು ದಿನಗಳಿಂದ ಎಲ್ಲಾ ಪ್ರಾದೇಶಿಕ ಪಕ್ಷಗಳ ಮುಖಂಡರನ್ನು ಭೇಟಿ ಮಾಡುತ್ತಿದ್ದ ಚಂದ್ರಬಾಬು ನಾಯ್ಡು ಇದೀಗ ಸಭೆಯ ದಿನಾಂಕವನ್ನು ಅಂತಿಮಗೊಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ತೆಲುಗು ದೇಶಂ ಪಕ್ಷದ ಮುಖಂಡ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಹಾಗು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರನ್ನು ಭೇಟಿ ಮಾಡಿದ ನಂತರ ಸಭೆಯ ದಿನಾಂಕವನ್ನು ಪ್ರಕಟಿಸಿದರು.

ಬಹುತೇಕ ಎಲ್ಲಾ ಪಕ್ಷಗಳ ಅಭಿಪ್ರಾಯ ಒಂದೇ ರೀತಿ ಇದೆ. ಕೆಲವೊಂದು ಪಕ್ಷಗಳ ಆಭಿಪ್ರಾಯ ಭಿನ್ನವಾಗಿವೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಜೊತೆ ನಮಗೆ ಭಿನ್ನಾಭಿಪ್ರಾಯ ಇತ್ತು. ಈಗ ಅದು ತಿಳಿಯಾಗಿದೆ. ಅದೇ ರೀತಿ ಇತರೆ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯ ತೊರೆಯಬಹುದು ಎಂದು ಚಂದ್ರಬಾಬು ನಾಯ್ಡು ಮಾಧ್ಯಮಗಳಿಗೆ ತಿಳಿಸಿದರು.

Next Story

RELATED STORIES