ಪಂಚಭೂತಗಳಲ್ಲಿ `ಅನಂತ' ಲೀನ: ರಾಷ್ಟ್ರ ನಾಯಕರಿಂದ ಅಂತಿಮ ನಮನ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಎಚ್.ಎನ್. ಅನಂತ್ಕುಮಾರ್ ಬಿಜೆಪಿಯ ರಾಷ್ಟ್ರನಾಯಕರು ಹಾಗೂ ಅಪಾರ ಅಭಿಮಾನಿಗಳ ಕಂಬನಿಯೊಂದಿಗೆ ಪಂಚಭೂತಗಳಲ್ಲಿ ಲೀನರಾದರು.
ಬೆಂಗಳೂರಿನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಶ್ವಲಾಯನ ಸ್ಮಾರ್ಥ ಸಂಪ್ರದಾಯ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಅಂತಿಮ ವಿಧಿವಿಧಾನಗಳನ್ನು ಸಹೋದರ ನಂದಕುಮಾರ್ ಪೂರೈಸಿದರೆ, ಪುರೋಹಿತ ಶ್ರೀನಾಥ್ ಮುನ್ನಡೆಸಿದರು. ಸರಕಾರದ ಗೌರವ ಸಲ್ಲಿಕೆ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾತ್ರಿ ಆಗಮಿಸಿ ಅಂತಿಮ ದರ್ಶನ ಪಡೆದರು. ಬಿಜೆಪಿಯ ಹಿರಿಯ ನಾಯಕ ಹಾಗೂ ಅನಂತ್ ಕುಮಾರ್ ಅವರ ಗುರು ಎಲ್.ಕೆ. ಆಡ್ವಾಣಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಕ್ಷಣಾ ಸಚಿವ ನಿರ್ಮಲಾ ಸೀತಾರಾಮ್, ಗೃಹ ಸಚಿವ ರಾಜನಾಥ್ ಸಿಂಗ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡಯ ಸೇರಿದಂತೆ ಹಲವು ಗಣ್ಯರು ಅಂತಿಮ ಸಂಸ್ಕಾರದ ವೇಳೆ ಉಪಸ್ಥಿತರಿದ್ದರು.
ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಳಗ್ಗೆಯಿಂದ ಅನಂತ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ರಾಜ್ಯದ ಹಲವಾರು ನಾಯಕರು ಆಗಮಿಸಿದ್ದರು.