Top

ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ಮಂಜೂರು
X

ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿಗೆ 1ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಧೀಶ ಜಗದೀಶ್ ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಇಬ್ಬರು ಭದ್ರತೆ ಹಾಗೂ 1 ಲಕ್ಷ ರೂ. ಠೇವಣಿ ಆಧಾರದ ಮೇಲೆ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದ್ದರು.

ಆಂಬಿಡೆಂಟ್​ ಪ್ರಕರಣದಲ್ಲಿ ವಿಚಾರಣೆಗೆ ಆಗಮಿಸಿದ್ದ ಜನಾರ್ದನ ರೆಡ್ಡಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಬದಲು ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಜನಾರ್ದನ ರೆಡ್ಡಿಗೆ ಜಾಮೀನು ದೊರೆಯುತ್ತಿದ್ದಂತೆ ಪರಪ್ಪನ ಅಗ್ರಹಾರ ಬಳಿ ಅಭಿಮಾನಿಗಳು ಸಂಭ್ರಮಾಚರಿಸಿದರು.

Next Story

RELATED STORIES