Top

ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟುಹೋದ ತಾಯಿ!

ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟುಹೋದ ತಾಯಿ!
X

ಒಂದು ದಿನದ ಮಗುವನ್ನು ತಾಯಿಯೇ ಆಸ್ಪತ್ರೆಯಲ್ಲಿ ಬಿಟ್ಟು ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮೀಠಕಲ್ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬುಧವಾರ ಬೆಳಗಿನ ಜಾವ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗು ಪತ್ತೆಯಾಗಿದ್ದು, ಇದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿಗಳು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಮಗು ಜನಿಸಿದೆ. ಹೀಗಾಗಿ ಒಂದು ದಿನದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿರಬಹುದೆಂದು ಶಂಕೆವ್ಯಕ್ತವಾಗಿದೆ.

ಇನ್ನೂ ಹೆಣ್ಣು ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಂದ ರಕ್ಷಣೆ ಮಾಡಲಾಗಿದ್ದು. ಯಾದಗಿರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಗುವಿಗೆ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತೀದೆ.

ಈ ಸಂಬಂಧ ಗುರುಮೀಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Next Story

RELATED STORIES