Top

ಯಡಿಯೂರಪ್ಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ?

ಯಡಿಯೂರಪ್ಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ?
X

ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲು ಹಾಗೂ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ಎಸ್​. ಯಡಿಯೂರಪ್ಪ ಅವರನ್ನು ಬದಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವುದು ಯಡಿಯೂರಪ್ಪ ಅವರ ಸಂಕಷ್ಟ ಹೆಚ್ಚಿಸಿದೆ.

ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ, ಬೆಂಗಳೂರಿಗೆ ಭೇಟಿ ನೀಡಿದ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಆರ್​ಎಸ್​ಎಸ್​ ಮುಖಂಡರ ಜೊತೆ ಮಾತುಕತೆ ನಡೆಸಿದ ನಂತರ ಮಂಗಳೂರಿನ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯಾಧ್ಯಕ್ಷರ ಸ್ಥಾನದಲ್ಲಿ ಬದಲಾವಣೆ ತರಲು ಚಿಂತನೆ ನಡೆದಿದ್ದು, ಇದಕ್ಕಾಗಿ ಯುವ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಆದರೆ ಈ ಬದಲಾವಣೆಯಿಂದ ಲಿಂಗಾಯತ ಮತ ಬ್ಯಾಂಕ್​ ಹೊಡೆತ ಬೀಳುವುದೇ ಎಂಬ ಬಗ್ಗೆಯೂ ಚಿಂತನೆ ನಡೆದಿದೆ.

ಒಂದು ವೇಳೆ ಯಡಿಯೂರಪ್ಪ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಅವರ ಬದಲು, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಮಾಜಿ ಸಚಿವ ಸಿ.ಟಿ ರವಿ, ಅನಂತ್ ಕುಮಾರ್ ಹೆಗ್ಡೆ, ಮಾಜಿ ಡಿ.ಸಿ.ಎಂ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಶ್ರೀರಾಮುಲು ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿವೆ.

ಯಡಿಯೂರಪ್ಪ ನಂತರ ಲಿಂಗಾಯತ ಪ್ರಬಲ ನಾಯಕ ಬಿಜೆಪಿಯಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ನಾಯಕನಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದರೆ ಹಳೆ ಮೈಸೂರು ಪ್ರಾಂತ್ಯದಲ್ಲಿ ಪ್ರಾಬಲ್ಯ ಹೆಚ್ಚಿಸಿಕೊಳ್ಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

Next Story

RELATED STORIES