TV5 EXCLUSIVE: ವಿಶ್ವ ವಿದ್ಯಾಲಯದ ಸಿಬ್ಬಂದಿಗಳ ನಿರ್ಲಕ್ಷ, ಪ್ರಶ್ನೆ ಪತ್ರಿಕೆ ಸೋರಿಕೆ

X
TV5 Kannada16 Nov 2018 5:23 AM GMT
ಕಲಬುರಗಿ ವಿಶ್ವವಿದ್ಯಾಲಯದ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ , ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇಂದು 10 ಗಂಟೆಗೆ ಪ್ರಾರಂಭವಾಗಬೇಕಿದ್ದ ಪದವಿ ಪ್ರಥಮ ವರ್ಷದ ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಪರೀಕ್ಷೆ ಆರಂಭಕ್ಕೂ ಅರ್ಧಗಂಟೆ ಮುಂಚೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ವಿಶ್ವವಿದ್ಯಾನಿಲಯದ ಸಿಬ್ಬಂದಿಗಳ ತಪ್ಪಿನಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆ ಬರೆಯಲು ಹೋಗಬೇಕಾದ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿದ್ದು, ಮತ್ತೊಂದು ಬಾರಿ ಪರೀಕ್ಷೆ ನಡೆಯಬಹುದೆಂಬ ಆತಂಕ ಮೂಡಿದೆ. ಇನ್ನು ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆ ಟಿವಿ5ಗೆ ಲಭ್ಯವಾಗಿದೆ.
Next Story