ಧಾರವಾಡದಲ್ಲಿ ಭೀಕರ ಅಪಘಾತ: 6 ಸಾವು

X
TV5 Kannada17 Nov 2018 6:04 AM GMT
ಲಾರಿ-ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟ ದಾರುಣ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮೃತಪಟ್ಟಿದ್ದಾರೆ. ಮುಂಬೈ ಮೂಲದ ವಿಶ್ವನಾಥ್ (76), ದಿನಕರ್ (74), ರಮೇಶ್ ಜಯಪಾಲ್ (70), ಸುಮೇಧಾ (65), ಲಾಹು (65) ಮತ್ತು ಸುಚಿತ್ರಾ (65) ಮೃತಪಟ್ಟ ದುರ್ದೈವಿಗಳು.
ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದಾಗ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳದಲ್ಲೇ ಐವರು ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
10 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲಿಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
Next Story