Top

ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ: ಕುಮಾರಸ್ವಾಮಿ

ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ: ಕುಮಾರಸ್ವಾಮಿ
X

ಮುಖ್ಯಮಂತ್ರಿ ಸ್ಥಾನ ಯಾರಿಗೂ ಶಾಶ್ವತವಲ್ಲ. ಮುಖ್ಯಮಂತ್ರಿ ಸ್ಥಾನ ನಿಭಾಯಿಸಲು ರಾಜ್ಯದಲ್ಲಿ ತುಂಬಾ ಜನರು ಇದ್ದಾರೆ. ಜಿ. ಪರಮೇಶ್ವರ್ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಧ್ಯಮಗಳೊಂದಿಗೆ ಶನಿವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಆಗುವ ಅರ್ಹತೆ ಇರುವವರಲ್ಲಿ ಜಿ.ಪರಮೇಶ್ವರ್ ಕೂಡ ಒಬ್ಬರು. ಅವರ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವಕಾಶ ಸಿಕ್ಕರೆ ಮುಖ್ಯಮಂತ್ರಿ ಸ್ಥಾನ ನಿಭಾಯಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದರಿಂದ ಸಿಎಂ ಸ್ಥಾನಕ್ಕೆ ಪರಮೇಶ್ವರ್ ಪರೋಕ್ಷವಾಗಿ ಆಸೆ ವ್ಯಕ್ತಪಡಿಸಿದ್ದರು.

ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಸಿಎಂ ಕುಮಾರಸ್ವಾಮಿ, ರಾಜ್ಯದಲ್ಲಿ ಈಗಾಗಲೇ 100 ಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಬರ ಪರಿಹಾರ ಕಾರ್ಯಕ್ಕಾಗಿ 16 ಸಾವಿರ ಕೋಟಿ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಅತಿವೃಷ್ಠಿಯಾದಾಗಲೂ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ನಯಾಪೈಸೆ ಅನುದಾನ ನೀಡಿರಲಿಲ್ಲ, ಹೀಗ ಅತಿವೃಷ್ಠಿ ವೇಳೆ 250 ಕೋಟಿ ರಾಜ್ಯ ಸರ್ಕಾರ ಭರಿಸಿದೆ ಎಂದರು.

ರೈತರಿಗೆ ಖಾಸಗಿ ಬ್ಯಾಂಕ್ ಗಳಿಂದ ಕಿರುಕುಳ ನೀಡಲಾಗುತ್ತೀದೆ. ರೈತರಿಗೆ ಕಿರುಕುಳ ನೀಡುವ ಬ್ಯಾಂಕ್ ಗಳ ಉದ್ಧಟತನ ಸಹಿಸಲು ಆಗದು. ನಮ್ಮಲ್ಲೂ ಅಸ್ತ್ರಗಳಿವೆ, ನಾವೂ ಅದನ್ನು ತೋರಿಸಬೇಕಾಗುತ್ತದೆ. ಸರ್ಕಾರವೂ ಬ್ಯಾಂಕ್ ಗಳಲ್ಲಿ ಮುಂಗಡ ಠೇವಣಿ ಹಣ ಇಟ್ಟಿದೆ. ರೈತರಿಗೆ ಕಿರುಕುಳ ನೀಡಿದರೆ ವಾಪಸ ಪಡೆಯಲು ಹಿಂಜರಿಯುವುದಿಲ್ಲ ಎಂದು ಸಾಲಪಾವತಿ ಮಾಡದ ರೈತರಿಗೆ ನೊಟೀಸ್ ಕೊಟ್ಟಿರುವ ಖಾಸಗಿ ಬ್ಯಾಂಕ್ ಗಳಿಗೆ ಕುಮಾರಸ್ವಾಮಿ ಎಚ್ಚರಿಕೆಯನ್ನು ನೀಡಿದರು.

Next Story

RELATED STORIES