Top

ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ರೋಗಿ ಸೇರಿ ನಾಲ್ವರ ಸಾವು

ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ರೋಗಿ ಸೇರಿ ನಾಲ್ವರ ಸಾವು
X

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸೇರಿದಂತೆ ನಾಲ್ವರು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ತಿರುಚಿಯಿಂದ ಬೆಂಗಳೂರಿಗೆ ಬರುತಿದ್ದ ಆ್ಯಂಬುಲೆನ್ಸ್ ತಮಿಳುನಾಡಿನ ಕೃಷ್ಣಗಿರಿ ಬಳಿಯ ಸೀತರಾಮನಗರ ಬಳಿ ಅಪಘಾತಕ್ಕೀಡಾಯಿತು. ಮುಂಜಾನೆ ಆಗಿದ್ದರಿಂದ ದಟ್ಟವಾದ ಮಂಜಿನ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಅಂಬ್ಯುಲೆಸ್ ಚಾಲಕ ಜೈ ಶಂಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತಪಟ್ಟವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಹೂಸೂರು ಪೋಲಿಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ವಾಹನವನ್ನು ತೆರವುಗೊಳಿಸಿದರು.

Next Story

RELATED STORIES