Top

ಪೇಜಾವರ ಶ್ರೀಗಳ ಭದ್ರತಾ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು

ಪೇಜಾವರ ಶ್ರೀಗಳ ಭದ್ರತಾ ವಾಹನಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು
X

ಉಡುಪಿಯ ಪೇಜಾವರ ಶ್ರೀಗಳ ಎಸ್ಕಾರ್ಟ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಹೊಸಕೋಟೆ ತಾಲೂಕಿನ ಕರಪನಹಳ್ಳಿ ಗೇಟ್ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಚಿಂತಾಮಣಿ ಮೂಲದ ರಾಮಕೃಷ್ಣಯ್ಯ (65) ಮತ್ತು ಸುಲೋಚನಮ್ಮ(55) ಮೃತ ದುರ್ದೈವಿಗಳು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಬಳಿ ಈ ಘಟನೆ ಸಂಭವಿಸಿದ್ದು, ಹೊಸಕೋಟೆಯಿಂದ ಚಿಂತಾಮಣಿ ರಸ್ತೆಯಲ್ಲಿ ತೆರಳುತ್ತಿದ್ದ ಎಸ್ಕಾರ್ಟ್ ವಾಹನಕ್ಕೆ ಎದುರಿನಿಂದ ಬಂದ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ.

ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿದ್ದ ಎಎಸ್ಐ ಶಂಭಯ್ಯ ಗೆ ಗಾಯವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ವತ್ರೆಗೆ ದಾಖಲಿಸಲಾಗಿದೆ.

ನಂದಗುಡಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Next Story

RELATED STORIES