Top

ಗಡುವು ನೀಡಿ ಪ್ರತಿಭಟನೆ ವಾಪಸ್ ಪಡೆದ ಕಬ್ಬು ಬೆಳೆಗಾರರು

ಗಡುವು ನೀಡಿ ಪ್ರತಿಭಟನೆ ವಾಪಸ್ ಪಡೆದ ಕಬ್ಬು ಬೆಳೆಗಾರರು
X

ಸರ್ಕಾರ ಕಾರ್ಖಾನೆಗಳಿಂದ ಬಾಕಿ ಇರುವ ಬಿಲ್ ಪಾವತಿ ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರು 15 ದಿನಗಳ ಗಡುವು ನೀಡಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಬೆಳಗಾವಿಯಲ್ಲಿ ನಡೆಯಬೇಕಿದ್ದ ಸಭೆಯನ್ನು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಗಳೂರಿಗೆ ವರ್ಗಾಯಿಸಿದ್ದರು. ಇದರ ಬೆನ್ನಲ್ಲೇ ರೈತರ ಬಗ್ಗೆ ಮುಖ್ಯಮಂತ್ರಿಗಳ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯಾದ್ಯಂತ ಆಗಮಿಸಿದ್ದ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಕುಮಾರಸ್ವಾಮಿ ಬದಲು ಸಚಿವ ಬಂಡೆಪ್ಪ ಕಾಶೆಂಪೂರ್ ರೈತರು ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕ್ ಬಳಿ ತೆರಳಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ್ದೂ ಅಲ್ಲದೇ ಶೀಘ್ರ ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದ್ದರು.

ಸಚಿವರ ಭರವಸೆಗೂ ಮಣಿಯದ ರೈತರು, ಪ್ರತಿಭಟನೆ ಮುಂದುವರಿಸಿದರಾದರೂ, ಸೋಮವಾರ ಸಂಜೆ ವೇಳೆಗೆ ಸಮಸ್ಯೆಗಳನ್ನು ಬಗೆಹರಿಸಲು ಸರಕಾರಕ್ಕೆ 15 ದಿನಗಳ ಗಡುವು ನೀಡಿ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ನಂತರ ತಮ್ಮ ಊರುಗಳಿಗೆ ಮರಳಿದರು.

Next Story

RELATED STORIES