ಪಬ್, ಬಾರ್, ಹೋಟೆಲ್ಗಳಲ್ಲಿ ಧೂಮಪಾನ ನಿಷೇಧ!

ರಾಜ್ಯದಲ್ಲಿನ ಬಾರ್, ರೆಸ್ಟೋರೆಂಟ್, ಪಬ್ ಹಾಗೂ ಹೋಟೆಲ್ಗಳಲ್ಲಿ ಧೂಮಪಾನ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.
ಪೌರಾಡಳಿತ ಹಾಗೂ ಆರೋಗ್ಯ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನಕ್ಕೆ ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಪಡೆಯದೇ ಇದ್ದರೆ ಪರವಾನಗಿ ರದ್ದು ಮಾಡಲಾಗುವುದು ಎಂದು ಸೂಚಿಸಲಾಗಿದೆ.
ಬೆಂಗಳೂರು ನಗರ ಸೇರಿದಂತೆ ನಾನಾ ಕಡೆ ಅನಧಿಕೃತ ಹುಕ್ಕ ಬಾರ್ಗಳು ಕಾರ್ಯಚರಿಸುತ್ತಿರುವ ಬಗ್ಗೆ ಅಕ್ಟೋಬರ್ 6ರಂದು ಟಿವಿ5 ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸರಕಾರ ಸೂಕ್ತ ಕ್ರಮಕ್ಕೆ ಮುಂದಾಗಿದೆ.
ಸಾರ್ವಜನಿಕ ಸ್ಥಳ ಮತ್ತು ಬಾರ್ ಗಳಲ್ಲಿ ಧೂಮಪಾನ ನಿಷೇಧ ಜಾರಿಯಲ್ಲಿದ್ದು, ಧೂಮಪಾನಕ್ಕೆ ಪ್ರಚೋದನಕಾರಿಯಾದ ವಸ್ತುಗಳನ್ನು ಇಡುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ತಂಬಾಕು ಸೇವನೆಯಿಂದ ಆರೋಗ್ಯ ಸಂಬಂಧಿ ಖಾಯಿಲೆ ಹೆಚ್ಚುತಿರುವ ಹಿನ್ನಲೆ ಈ ಆದೇಶ ಹೊರಡಿಸಿರುವ ಪೌರಾಡಳಿತ ಇಲಾಖೆ, ಸಾರ್ವಜನಿಕ ಹಾಗೂ ಜನದಟ್ಟಣೆಯ ಹೋಟೆಲ್ ಹಾಗೂ ಬಾರ್ ಗಳಲ್ಲಿ ಧೂಮಪಾನ ನಿಷೇಧಿಸಿದೆ.