Top

ಕಾಶ್ಮೀರದಲ್ಲಿ ಎನ್​ಕೌಂಟರ್​ಗೆ ನಾಲ್ವರು ಉಗ್ರರ ಹತ್ಯೆ

ಕಾಶ್ಮೀರದಲ್ಲಿ ಎನ್​ಕೌಂಟರ್​ಗೆ ನಾಲ್ವರು ಉಗ್ರರ ಹತ್ಯೆ
X

ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದ ಎನ್​ಕೌಂಟರ್​ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ.

ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ರಾಜಧಾನಿ ಶ್ರೀನಗರದಿಂದ 60 ಕಿ.ಮೀ. ದೂರದಲ್ಲಿರುವ ನಾಡಿಗಮ್ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಭಾರತೀಯ ಸೇನೆಯ ಪ್ಯಾರಾಟ್ರೂಪ್ ಮತ್ತು ಕೇಂದ್ರೀಯ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತು.

ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಇಲಾಖೆ ಸುಳಿವಿನ ಮೇರೆಗೆ ಮಂಗಳವಾರ ಮುಂಜಾನೆ ಏಕಾಏಕಿ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬ ಯೋಧ ಹುತಾತ್ಮನಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ರಾಜೇಶ್ ಕೈಲಾ ತಿಳಿಸಿದ್ದಾರೆ.

Next Story

RELATED STORIES