ಘಟನೆ ಕಂಡು ಕಣ್ಣೀರಿಟ್ಟ ಸಿಎಂ: 5 ಲಕ್ಷ ಪರಿಹಾರ ಘೋಷಣೆ

ಶನಿವಾರ ಸಂಜೆ ನಡೆಯ ಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಂದೂಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.
ಕನಗನಮರಡಿ ಬಸ್ ಅಪಘಾತದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಸೂಚನೆಯನ್ನು ಕೂಡ ನೀಡಿದ್ದಾರೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆಗಳನ್ನು ನೀಡಿದ್ದರು.
ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ,ಸಿಎಂ ಕುಮಾರಸ್ವಾಮಿ ಅವರು ತಮ್ಮಎಲ್ಲಾಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮಂಡ್ಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ತಿಳಿಸಿದರು.
ಮೃತ ಕುಟುಂಬದವರ ಆಕ್ರಂಧನ, ಸಾಲಗಿ ಮಲಗಿರುವ ಶವಗಳನ್ನು ಕಂಡು ಸಿ ಎಂ ಕುಮಾರಸ್ವಾಮಿ ಕಣ್ಣೀರಿಟ್ಟರು. ರಾಜ್ಯದಲ್ಲಿ ಖಾಸಗಿ ಬಸ್ ಸ್ಥಗಿತಗೊಳಿಸುವ ಬಗ್ಗೆ ಚಿಂತನೆ ನಡೆಸ್ತೇವೆ.ಈ ಘಟನೆ ನಡೆಯಬಾರದಿತ್ತು. ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದರು.