ಪ್ರಶ್ನೆ ಪತ್ರಿಕೆ ಸೋರಿಕೆ: ಪೊಲೀಸ್ ಪೇದೆ ಪರೀಕ್ಷೆ ಮುಂದೂಡಿಕೆ

X
TV5 Kannada24 Nov 2018 11:10 AM GMT
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಪೊಲೀಸ್ ಪೇದೆ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿ ತಿಳಿಸಿದ್ದಾರೆ.
ಹಾಸನದ ಸಕಲೇಶಪುರ ತಾಲೂಕಿನ ಕೊಡಲಿಪೇಟೆ ಗಡಿ ಭಾಗದಲ್ಲಿ ಹಣ ಪಡೆದು 150 ಮಂದಿಗೆ ಪ್ರಶ್ನೆ ಪತ್ರಿಕೆಯನ್ನು ಶಿವಕುಮಾರ್ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದರು. ಬೆಂಗಳೂರು ಮೂಲದ ಶಿವಕುಮಾರ್ ಬಂಧನದ ನಂತರ ಪ್ರಶ್ನೆಪತ್ರಿಕೆ ಸೋರಿಕೆ ವಿಷಯ ಬಹಿರಂಗವಾಗಿತ್ತು.
ಪ್ರತಿ ಪರಿಕ್ಷಾರ್ಥಿಯಿಂದ 5ರಿಂದ 8 ಲಕ್ಷ ಹಣ ಪಡೆದು ಶಿವಕುಮಾರ್ ಪ್ರಶ್ನೆ ಪತ್ರಿಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶಿವಕುಮಾರ್ ಹಿಂದೆಯೂ ಪಿಯುಸಿ ಪ್ರಶ್ನೆ ಪತ್ರಿಕೆ ಹಗರಣದಲ್ಲಿ ಬಂಧಿತನಾಗಿದ್ದ, ಕೋಕಾ ಆಕ್ಟ್ ಅಡಿ ಬಂಧಿತನಾಗಿ ಕೆಲವು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದು ಬಂದಿದೆ.
ಇದೀಗ ಮತ್ತೆ ಆರೋಪಿಯನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದ್ದಾರೆ.
Next Story