Top

ಮಂಡ್ಯದಲ್ಲಿ ಅಂಬರೀಶ್ ಪ್ರತಿಮೆ ಸ್ಥಾಪಿಸಿದ ಅಭಿಮಾನಿ!

ಮಂಡ್ಯದಲ್ಲಿ ಅಂಬರೀಶ್ ಪ್ರತಿಮೆ ಸ್ಥಾಪಿಸಿದ ಅಭಿಮಾನಿ!
X

ನಟ, ರಾಜಕಾರಣಿಯಾಗಿ ಸ್ನೇಹಜೀವಿಯಾಗಿ ಎಲ್ಲರ ಮನಸ್ಸಿನಲ್ಲಿರುವ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅಭಿಮಾನಿಯೊಬ್ಬ ಅವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಂಡ್ಯದಲ್ಲಿ ಪಿಒಪಿ ಪ್ರತಿಮೆ ಅನಾವರಣಗೊಳಿಸಿದ ಅಭಿಮಾನಿ ಪೂಜೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಮೂಲಕ ಅಂಬರೀಶ್ ಅವರಿಗೆ ವಿಭಿನ್ನ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಪ್ರತಿಮೆ ಅನಾವರಣಗೊಳಿಸಲಾಗಿದೆ. ಗ್ರಾಮಸ್ಥರು ಈ ಅಭಿಮಾನಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Next Story

RELATED STORIES