Top

ರಾಮಮಂದಿರ ಘೋಷಣೆಗೆ ಗಡುವು ನೀಡಿದ ಪೇಜಾವರಶ್ರೀ

ರಾಮಮಂದಿರ ಘೋಷಣೆಗೆ ಗಡುವು ನೀಡಿದ ಪೇಜಾವರಶ್ರೀ
X

ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಆಯಿತು. ರಾಮ ಮಂದಿರ ನಿರ್ಮಾಣಕ್ಕಾಗಿ ಕಾದಿದ್ದು ಮುಗಿಯಿತು. ಇನ್ನು ನಾವು ಕಾಯಲು ನಾವು ಸಿದ್ಧವಿಲ್ಲ. ಕುಂಭಮೇಳಕ್ಕಿಂತ ಮೊದಲು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸುಗ್ರಿವಾಜ್ಞೆ ಹೊರಡಿಸದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಗಡುವು ನೀಡಿದ್ದಾರೆ.

ಮಂಗಳೂರಿನ ನೆಹರೂ ಕೇಂದ್ರ ಮೈದಾನದಲ್ಲಿ ಭಾನುವಾರ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿ ಮುಗಿಯುತ್ತ ಬಂದಿದೆ. ಆದರೂ ರಾಮ ಮಂದಿರ ನಿರ್ಮಾಣದ ಯಾವುದೇ ಸೂಚನೆ ಇಲ್ಲ. ಮುಂದಿನ ಫೆಬ್ರವರಿಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಸುಗ್ರಿವಾಜ್ಞೆ ಹೊರಡಿಸದೇ ಇದ್ದಲ್ಲಿ ಎಲ್ಲಾ ಸಂಸದರು ರಾಜೀನಾಮೆ ಕೊಡಲು ಸಿದ್ದರಾಗಬೇಕು ಎಂದು ಕರೆ ನೀಡಿದರು.

ಇದೇ ಕುಂಭಮೇಳದವರೆಗೂ ಕೇಂದ್ರ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸುತ್ತಾರೆ ಅನ್ನೊ ಭರವಸೆ ಇದೆ. ಒಂದು ವೇಳೆ ಸ್ಪಂದಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏನು ಮಾಡಬೇಕು. ಹೋರಾಟ ಹೇಗಿರಬೇಕು ಎಂಬುದನ್ನು ತೀರ್ಮಾನಿಸುತ್ತೇವೆ ಎಂದು ಪೇಜಾವರಶ್ರೀ ಗಡುವು ನೀಡಿದರು.

ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿಲ್ಲ. ಒಂದು ವೇಳೆ ವಿರೋಧ ವ್ಯಕ್ತಪಡಿಸಿದರೆ ಮುಂದಿನ ಚುನಾವಣೆಯಲ್ಲಿ ಆ ಪಕ್ಷಕ್ಕೆ ಬುದ್ಧಿ ಕಲಿಸಬೇಕಾಗುತ್ತದೆ ಎಂದು ಪೇಜಾವರ ಶ್ರೀ ಹೇಳಿದರು.

ಸಮಾವೇಶದಲ್ಲಿ ಆರ್​ಎಸ್​ಎಸ್ ಮುಖಂಡ ಸೋಹನ್ ಸೋಲಂಕಿ, ಸಂಸದ ನಳೀನ್ ಕುಮಾರ್ ಕಟೀಲ್​, ಬಿಜೆಪಿ ಶಾಸಕರು, ಕಲ್ಲಡ್ಕ ಪ್ರಭಾಕರ ಭಟ್ ಮುಂತಾದವರು ಉಪಸ್ಥಿತರಿದ್ದರು.

Next Story

RELATED STORIES