ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ..!?

X
TV5 Kannada27 Nov 2018 4:10 AM GMT
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಸಿನಿಮಾ ನಟ, ಡ್ಯಾನ್ಸ್ ಮಾಸ್ಟರ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಗೂಳಿಹಟ್ಟಿ ಚಿತ್ರದ ಸಹನಟನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಕರಣ್ ಮಹಾದೇವ್(ಮಂಜುನಾಥ್) ಎಂಬಾತನ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಡಾನ್ಸ್ ಹೇಳಿಕೊಡುವ ನೆಪದಲ್ಲಿ ಯುವತಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆನ್ನಲಾಗಿದೆ.
ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ ಕರಣ್, ಹುಡುಗಿಯ ಮದುವೆ ಫಿಕ್ಸ್ ಆಗಿದ್ರೂ ಕೂಡ, ಆಕೆಗೆ ಬೆದರಿಸಿ ಅತ್ಯಾಚಾರವೆಸಗಿದ್ದಾನೆ.
ಫೇಸ್ಬುಕ್ನಲ್ಲಿ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಕಿರಾತಕ, ಡಾನ್ಸ್ ಹೇಳಿಕೊಡುವ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿದ್ದ.
ಇನ್ನು ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story