TV5 ವಿರುದ್ಧ ಕೇಸು, ಗೂಂಡಾಗಿರಿಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಕುರಿತ ವರದಿ ಹಿನ್ನೆಲೆಯಲ್ಲಿ ಟಿವಿ5 ಕಚೇರಿ ವಿರುದ್ಧ ಜೆಡಿಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಾಗೂ ಪೊಲೀಸರು ಎಫ್​ಐಆರ್ ದಾಖಲಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಟಿವಿ5 ಬೆಂಬಲಿಸಿ ಹಾಗೂ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆದಿವೆ. ಬಿಜೆಪಿ ಸೇರಿದಂತೆ ಹಲವು ಗಣ್ಯರು ಸರಕಾರದ ಈ ವರ್ತನೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಇದಾಗಿದೆ ಎಂದು ಖಂಡಿಸಿದ್ದಾರೆ.

ಕೊಪ್ಪಳ, ಬೆಳಗಾವಿ, ಹಾಸನ, ಚಿತ್ರದುರ್ಗ, ಕಾರವಾರ ಸೇರಿದಂತೆ ಹಲವಡೆ ಪ್ರತಿಭಟನೆಗಳು ನಡೆದಿದ್ದು, ಟಿವಿ5 ವಿರುದ್ಧ ದಾಖಲಿಸಿರುವ ಎಫ್​ಐಆರ್ ಹಿಂಪಡೆಯಬೇಕು ಎಂದು ಆಗ್ರಹಿಸಿವೆ.

Recommended For You

1 Comment

Leave a Reply

Your email address will not be published. Required fields are marked *