Top

`ರಾಮಮಂದಿರ ಬೇಡ, ಸಾಲಮನ್ನಾ ಮಾಡಿ ಸಾಕು'

`ರಾಮಮಂದಿರ ಬೇಡ, ಸಾಲಮನ್ನಾ ಮಾಡಿ ಸಾಕು
X

ನಮಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಬೇಕಿಲ್ಲ. ಸಾಲಮನ್ನ ಮಾಡಿ ಸಾಕು ಎಂದು ಆಗ್ರಹಿಸಿ ರೈತರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಆಗ್ರಹಿಸಿ ರಾಜಧಾನಿ ನವದೆಹಲಿಯಲ್ಲಿ ಎರಡು ದಿನಗಳ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಅಖಿಲ ಭಾರತ ಕಿಸಾನ್ ಸಂಘರ್ಷ್ ಕೋ-ಆರ್ಡಿನೇಷನ್ (ಎಐಕೆಎಸ್​ಸಿಸಿ) ನೇತೃತ್ವದಲ್ಲಿ ದೇಶಾದ್ಯಂತ ಕೃಷಿ ಹಾಗೂ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ನಿರತ ಸಂಘಟನೆಯ ಸುಮಾರು 207 ಸಂಘಟನೆಗಳ ನೇತೃತ್ವದಲ್ಲಿ ಎರಡು ದಿನಗಳ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸುಮಾರು 25 ಕಿ.ಮೀ. ದೂರದವರೆಗೆ ದೇಶದ 5 ಭಿನ್ನ ದಿಕ್ಕುಗಳಿಂದ ಪ್ರತಿಭಟನಾ ಮೆರವಣಿಗೆ ಮೂಲಕ ದೆಹಲಿಗೆ ಆಗಮಿಸಿದ್ದು, ದೇಶಾದ್ಯಂತ ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎರಡು ದಿನಗಳ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸುಮಾರು 3500 ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜಿಸಲಾಗಿದೆ. ಪ್ರತಿಭಟನೆಯಲ್ಲಿ ಗುಜರಾತ್, ಆಂಧ್ರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಸೇರಿದಂತೆ ನಾನಾ ಕಡೆಯಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Next Story

RELATED STORIES