Top

ಹಂಪಿ ಉತ್ಸವ ನಾನೇ ಮಾಡಿಸುತ್ತೇನೆ: ಜನಾರ್ದನ ರೆಡ್ಡಿ

ಹಂಪಿ ಉತ್ಸವ ನಾನೇ ಮಾಡಿಸುತ್ತೇನೆ: ಜನಾರ್ದನ ರೆಡ್ಡಿ
X

ಹಂಪಿ ಉತ್ಸವ ಮೂರು ದಿನಗಳು ನಡೆಯಬೇಕಾಗಿರುವುದನ್ನು ರಾಜ್ಯಸರ್ಕಾರ ಎರಡು ದಿನಕ್ಕೆ ಕಡಿತಗೊಳಿಸಿರುವುದಕ್ಕೆ ಮಾಜಿ ಶಾಸಕ ಜನಾರ್ದನ ನ ರೆಡ್ಡಿ ರಾಜ್ಯ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದಾರೆ ಅ ಪತ್ರದ ಡಿಟೇಲ್ಸ್ ಇಲ್ಲಿದೇ ನೋಡಿ

ಬಳ್ಳಾರಿ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ವಿವಿಧ ಜಿಲ್ಲೆಗಳ ಜನರು ವರ್ಷದಿಂದ ವರ್ಷಕ್ಕೆ ಕಣ್ಣಲ್ಲಿ ಕಣ್ಣಿಟ್ಟು ಹಂಪಿ ಉತ್ಸವ ಸಡಗರಕ್ಕೆ ಕಾದು ಕುಳಿತಿರುತ್ತಾರೆ. ಅವರಿಗೆಲ್ಲ ನಿರಾಶೆಯಾಗಬಾರದು. ಒಟ್ಟಿನಲ್ಲಿ, ಹಂಪಿ ಉತ್ಸವ 3 ದಿನಗಳ ಕಾಲ ಸಡಗರ, ಸಂಭ್ರಮಗಳಿಂದ ಜರುಗಬೇಕೆನ್ನುವುದೇ ನನ್ನ ಇಚ್ಛೆಯಾಗಿದೆ ಎಂದು ಜನಾರ್ದನ ರೆಡ್ಡಿ ಟ್ವೀಟ್ ಮಾಡಿದ್ದಾರೆ.

ನಾಡಿನಲ್ಲಿ ವಿವಿಧೆಡೆ ಉತ್ಸವಗಳನ್ನು ಆಚರಿಸಲು ಉತ್ಸುಕತೆ ತೋರುತ್ತಿರುವ ರಾಜ್ಯ ಸರ್ಕಾರ ಕೇವಲ 3 ದಿನ ನಡೆಯುವ ಹಂಪಿ ಉತ್ಸವ ವಿಷಯದಲ್ಲಿ ಏನಾದರೂ ಒಂದು ಕುಂಟು ನೆಪ ಹೇಳುತ್ತಿರುವುದು ದುರಾದೃಷ್ಟಕರ.ನಾಡಿನ ವಿವಿಧ ಉತ್ಸವಗಳನ್ನು ನಡೆಸುವ ಸರ್ಕಾರ ಹಂಪಿ ಉತ್ಸವ ಆಚರಿಸಲು ಏನಾದರೊಂದು ನೆಪ ಹೇಳುತ್ತಲೇ ಬರುತ್ತಿದೆ. ಇಡೀ ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿರುವ ಹಂಪಿ ಉತ್ಸವ ರಾಜ್ಯದ ಜನತೆಗೆ ಅದರಲ್ಲೂ ಉತ್ತರ ಕರ್ನಾಟಕದ ಜನತೆಗೆ ಭಾವನಾತ್ಮಕವಾದ ಬೆಸುಗೆಯನ್ನು ಬೆಸೆಯುವಂಥದ್ದಾಗಿದೆ.

ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಂಪಿ ಉತ್ಸವವನ್ನು ಇಡೀ ಜಗತ್ತೇ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಉತ್ಸವ ಆಚರಿದ್ದೆವು. ನಾನಾಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದೆ. ತದನಂತರ ಉತ್ಸವ ಅದ್ದೂರಿಯಾಗಿ ನಡೆಯಲೇ ಇಲ್ಲ.

ಈಗ ಬರಗಾಲದ ನೆಪ ಹೇಳಿ ಉತ್ಸವ ರದ್ದುಗೊಳಿಸುವುದು ಸರಿಯೇ? ಎಂ.ಪಿ.ಪ್ರಕಾಶರು 3 ದಿನ ನಡೆಸಿದ್ದ ಹಂಪಿ ಉತ್ಸವವನ್ನು ಎರಡು ದಿನ ಆಚರಿಸುವುದು ಸರಿಯೇ? ಕಾಟಾಚಾರಕ್ಕೆ ಹಂಪಿ ಉತ್ಸವ ನಡೆಸದೇ ಅದ್ದೂರಿಯಾಗಿ ಉತ್ಸವ ನಡೆಸಲಿ. ಅದಕ್ಕೆ ಬೇಕಾದ ಎಲ್ಲ ರೀತಿಯ ಸಹಕಾರ ನಾನು ನೀಡುತ್ತೇನೆ.

ಹಂಪಿ ಉತ್ಸವ ನಮ್ಮ ಹೆಮ್ಮೆಯ ಹಬ್ಬ. ಈ ಉತ್ಸವ ಜನರಲ್ಲಿ ಪ್ರೀತಿ, ಬಾಂಧವ್ಯ, ಉಲ್ಲಾಸಗಳ ಜೊತೆ ಸಾಮರಸ್ಯಗಳನ್ನು ಹೆಚ್ಚಿಸುತ್ತಿದೆ. ಅಷ್ಟೇ ಅಲ್ಲ ಗತವೈಭವದ ಮೆರಗು, ನೆನಪು, ಸ್ಮರಣೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಒಂದು ಪ್ರತೀಕವಾಗಿದೆ. ಹಂಪಿ ಉತ್ಸವ ಯಾವುದೇ ಕಾರಣಕ್ಕೂ ಕಾಟಾಚಾರಕ್ಕೆ ನಡೆಯಬಾರದು. 3 ದಿನವೂ ಅದ್ದೂರಿಯಾಗಿಯೇ ನಡೆಯಬೇಕು ಎಂದರು.

Next Story

RELATED STORIES