ಗೋಕಾಕದಲ್ಲಿ ಭೀಕರ ಅಪಘಾತ: 6 ಮಹಿಳೆಯರ ಸಾವು

ಬುಲೆರೋ ಹಾಗೂ ಕಬ್ಬು ತುಂಬಿದ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ 6 ಮಂದಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ನಂದಿಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

ಸವದತ್ತಿ ತಾಲೂಕಿನ ಮಾಡಮಗೇರಿ ಹಾಗೂ ಯರಜರವಿ ಗ್ರಾಮದ ಗಂಗವ್ವ (30), ಕಾಶವ್ವ (70), ಯಲ್ಲವ್ವ (45), ಯಲ್ಲವ್ವ (40), ರೇಣುಕಾ (35), ಮಲ್ಲವ್ವ (50) ಮೃತ ದುರ್ದೈವಿಗಳು.

ಕಬ್ಬು ತುಂಬಿದ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದರಿಂದ ಬುಲೆರೋದಲ್ಲಿದ್ದ 6 ಮಹಿಳೆಯರು ಮೃತಪಟ್ಟಿದ್ದರು, 10ಕ್ಕೂ ಹೆಚ್ಚು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಪಾಲ್ಸ ಗ್ರಾಮದಲ್ಲಿನ ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ಮರಳುತ್ತಿದ್ದಾಗ ಸಂಭವಿಸಿದ ದುರಂತದಲ್ಲಿ ನಾಲ್ವರು ಸ್ಥಳದಲ್ಲಿ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.