ರೈಲಿನಿಂದ ಆಯತಪ್ಪಿ ಬಿದ್ದು ಮಾಜಿ ಶಾಸಕನ ಪುತ್ರ ಸಾವು

X
TV5 Kannada4 Dec 2018 5:41 AM GMT
ರೈಲಿನಿಂದ ಆಯತಪ್ಪಿ ಬಿದ್ದು ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರ ಸಾಗರ್ ಪಾಟೀಲ್ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.
ಬೆಂಗಳೂರಿನ ಶ್ರೀರಾಂಪುರ ಸೇತುವೆ ಬಳಿ ಚಲಿಸುತ್ತಿದ್ದ ರೈಲಿನಿಂದ ಸಾಗರ್ ಪಾಟೀಲ್ (40) ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಗೆಳೆಯರೊಂದಿಗೆ ಬೆಂಗಳೂರಿನಿಂದ ಬೆಳಗಾವಿಗೆ ರಾಣಿ ಚೆನ್ನಮ್ಮ ಎಕ್ಸಪ್ರೇಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಬೆಂಗಳೂರಿನ ಸಿಟಿ ಸೆಂಟ್ರಲ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story