ರೆಡ್ಡಿಗೆ ರಿಲೀಫ್, ಅಲಿಖಾನ್ ಭವಿಷ್ಯ ಮುಂದೇನು?

ಹೊಡಿಕೆದಾರಿಗೆ ಅಂಬಿಡೆಂಟ್ ಕಂಪನಿಯಿಂದ ವಂಚನೆ ಪ್ರಕರಣದ ಆರೋಪಿಗಳಾದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ತಮ್ಮ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತ ಅಲಿಖಾನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ಜನಾರ್ದನ ರೆಡ್ಡಿ ಪರ ವಕೀಲರು, ದೂರುದಾರಿಗೆ ಇನ್ನು ನೋಟಿಸ್ ಜಾರಿಯಾಗಿಲ್ಲವೆಂದು ಕೋರ್ಟ್ಗೆ ಮಾಹಿತಿ ನೀಡಿದರು.ಇದನ್ನು ಮಾನ್ಯ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಪೀಠ, ದೂರುದಾರಿಗೆ ನೋಟಿಸ್ ಜಾರಿ ಆಗಿ ವಿಚಾರಣೆಗೆ ಬರುವವರೆಗೂ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆ ಮುಂದೂಡಿದರು.

ಇದೇ ವೇಳೆ ಜಾಮೀನು ಕೋರಿ ಅಲಿಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ 1 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಧೀಶ ಜಗದೀಶ್ ವಾದ ಪ್ರತಿವಾದ ಆಲಿಸಿ ನಾಳೆಗೆ ತೀರ್ಪು ಕಾಯ್ದಿರಿಸಿದೆ.

Recommended For You

Leave a Reply

Your email address will not be published. Required fields are marked *