Top

ಸ್ಯಾಂಡಲ್‌ವುಡ್ ಹಿರಿಯ ನಿರ್ದೇಶಕ ಎ.ಆರ್.ಬಾಬು ಇನ್ನಿಲ್ಲ

ಸ್ಯಾಂಡಲ್‌ವುಡ್ ಹಿರಿಯ ನಿರ್ದೇಶಕ ಎ.ಆರ್.ಬಾಬು ಇನ್ನಿಲ್ಲ
X

ಬೆಂಗಳೂರು: ಹಿರಿಯ ನಿರ್ದೇಶಕ ಎ.ಆರ್.ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎ.ಆರ್.ಬಾಬು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಹಲೋ ಯಮ, ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಸೇರಿದಂತೆ 20ಕ್ಕೂ ಹೆಚ್ಚು ಚಿತ್ರ ನಿರ್ದೇಶಿಸಿದ್ದ ಬಾಬು, ಮಲ್ಲೆಶ್ವರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಚಿಕಿತ್ಸೆ ಫಲಿಸದೇ ಎ.ಆರ್.ಬಾಬು ಸಾವನ್ನಪ್ಪಿದ್ದು, ನಿರ್ದೇಶಕರ ಸಾವಿಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

Next Story

RELATED STORIES