Top

ನ್ಯಾಷನಲ್ ಹೆರಾಲ್ಡ್​ ಹಗರಣ: ಸೋನಿಯಾ, ರಾಹುಲ್​ಗೆ ಸಂಕಷ್ಟ

ನ್ಯಾಷನಲ್ ಹೆರಾಲ್ಡ್​ ಹಗರಣ: ಸೋನಿಯಾ, ರಾಹುಲ್​ಗೆ ಸಂಕಷ್ಟ
X

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದ ಸಂಬಂಧ ತುರ್ತು ಆದೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್​, ಈ ಸಂಬಂಧ ಆದಾಯ ತೆರಿಗೆ ಇಲಾಖೆ ತನಿಖೆ ತಡೆ ನೀಡಲು ನಿರಾಕರಿಸಿದೆ. ಈ ಮೂಲಕ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಹಾಗೂ ಪುತ್ರ ರಾಹುಲ್ ಗಾಂಧಿ ಮಿಶ್ರ ಫಲ ಪಡೆದಿದ್ದಾರೆ.

2010-11ರ ಆರ್ಥಿಕ ವರ್ಷದಲ್ಲಿ ತೆರಿಗೆ ವಂಚನೆ ಪ್ರಕರಣದ ರದ್ದುಪಡಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದರಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯನ್ಯಾಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಪೀಠ, ಈ ಆದೇಶ ನೀಡಿದೆ.

ಪಕ್ಷದ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಕುರಿತ ಇನ್ನೊಂದು ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ತೆರಿಗೆ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದರು.

Next Story

RELATED STORIES