Top

53ನೇ ಬಿಬಿಎಂಪಿ ಉಪಮೇಯರ್ ಆಗಿ ಆಯ್ಕೆಯಾದ ಭದ್ರೇಗೌಡ

53ನೇ ಬಿಬಿಎಂಪಿ ಉಪಮೇಯರ್ ಆಗಿ ಆಯ್ಕೆಯಾದ ಭದ್ರೇಗೌಡ
X

ಬೆಂಗಳೂರು: ರಮಿಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಬೆಂಗಳೂರು ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಬೆಂಗಳೂರಿನ 53ನೇ ಉಪಮೇಯರ್ ಆಗಿ ಜೆಡಿಎಸ್‌ನ ಭದ್ರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭದ್ರೇಗೌಡ ನಾಗಪುರ ವಾರ್ಡ್‌ನ ಪಾಲಿಕೆ ಸದಸ್ಯರಾಗಿದ್ದು, ನಗರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತೇವೆ ಅಂತ ಹೇಳಿದ್ದಾರೆ.

ಈ ಮೊದಲು ಬಿಜೆಪಿಯಿಂದ ಉಪಮೇಯರ್ ಅಭ್ಯರ್ಥಿಯಾಗಿ ಪದ್ಮಾವತಿ ಕಳ್ಕರೆಯವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಕಡೇ ಕ್ಷಣದಲ್ಲಿ ಅಭ್ಯರ್ಥಿ ಹಾಕದಿರಲು ಬಿಜೆಪಿ ತೀರ್ಮಾನ ಮಾಡಿತು.

ಈ ಕಾರಣದಿಂದಾಗಿ ಪ್ರತಿಸ್ಪರ್ಧಿ ಇಲ್ಲದ ಕಾರಣ, ಜೆಡಿಎಸ್‌ನ ಭದ್ರೇಗೌಡ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

Next Story

RELATED STORIES