Top

ಪ್ರಿಯಾಂಕಾ-ನಿಕ್ ಆರತಕ್ಷತೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಪ್ರಿಯಾಂಕಾ-ನಿಕ್ ಆರತಕ್ಷತೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ
X

ನವದೆಹಲಿ: ವೈವಾಹಿಕ ಜೀವನಕ್ಕೆ ಕಾಲಿರಿಸಿದ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಮತ್ತು ಅಮೆರಿಕದ ಪಾಪ್ ಸಿಂಗರ್ ನಿಕ್ ಜೋನಸ್ ದೆಹಲಿಯಲ್ಲಿ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಿಕ್-ಪಿಗ್ಗಿ ರಿಸೆಪ್ಷನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರಷ್ಟೇ ಅಲ್ಲದೇ, ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಬೆಳ್ಳಿ ಬಣ್ಣದ ಲೆಹೆಂಗಾದಲ್ಲಿ ಪ್ರಿಯಾಂಕಾ ಮಿಂಚಿದ್ದು, ಕಪ್ಪು ಬಣ್ಣದ ಟುಕ್ಸೆಡೋದಲ್ಲಿ ನಿಕ್ ಕಂಗೊಳಿಸುತ್ತಿದ್ದರು. ಡಿಸೆಂಬರ್ 1 ಮತ್ತು 2ರಂದು ಜೋಧಪುರದಲ್ಲಿ ಪಿಗ್ಗಿ-ನಿಕ್ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು.

Next Story

RELATED STORIES