ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಸ್ಥಾನ..?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರೆ ಅನ್ನೋ ನಂಬಿಕೆ, ಆಸೆ ನಮಗಿದೆ ಎಂದು ಬಳ್ಳಾರಿ ಕಂಪ್ಲಿ ಶಾಸಕ ಗಣೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಗುರುವಾರ ಮಾತನಾಡಿದ ಅವರು ಸಿದ್ದರಾಮಯ್ಯನವರ ಬಳಿ ನಾವು  ಮುಂದಿನ ದಿನಗಳಲ್ಲಿ ನೀವು ಮುಖ್ಯಮಂತ್ರಿ ಆಗಬೇಕು ಎಂದು ಮಾತನಾಡಿದ್ದೇವೆ, ಸಿದ್ದರಾಮಯ್ಯ ಕೂಡ ನೋಡಣ ಎಂದು ಹೇಳಿದ್ದಾರೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗಬೇಕು ಎನ್ನುವುದು ತಮಗಷ್ಟೇ ಅಲ್ಲ ಕಾಂಗ್ರೆಸ್​ನ ಕೆಲವು ಶಾಸಕರಿಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ಬೇಕು ಅನ್ನೋ ಇಂಗಿತ ಇದೆ ಎಂದು ಹೇಳಿದರು. ಈ ವಿಚಾರವಾಗಿ ನಾವು ವೇಣುಗೋಪಾಲ್ ಬಳಿ ಚರ್ಚೆ ನಡೆಸಿಲ್ಲ ಯಾರು ತಪ್ಪು ತಿಳಿದುಕೊಳ್ಳುವುದು ಬೇಡ ಎಂದು ಹೇಳಿದರು.

ಕುಮಾರಸ್ವಾಮಿ ಒಳ್ಳೆಯ ಆಡಳಿತ ನಡೆಸುತ್ತೀದ್ದಾರೆ ಅವರ ಬಗ್ಗೆ ಯಾವುದೇ ಅಸಮಾಧಾನವಿಲ್ಲ, ರೈತರ ಸಾಲಮನ್ನಾ ವಿಚಾರವಾಗಿ ಕೂಡ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ನಮಗೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಮಂತ್ರಿಯಾಗಬೇಕು ಎನ್ನುವ ಆಸೆ ಇದೆ ಎಂದು ಶಾಸಕ ಗಣೇಶ್  ಹೇಳಿದರು.